ರಾಷ್ಟ್ರ ಪುನರ್‌ ನಿರ್ಮಾಣದ ಕಲ್ಪನೆ ಸಾಕಾರವಾಗಲಿ.ವೇಣೂರಿನಲ್ಲಿ ಉದ್ಯೋಗ ನೈಪುಣ್ಯ ತರಬೇತಿ ಶಿಬಿರ ಉದ್ಘಾಟಿಸಿ ಶಾಸಕ ಪೂಂಜಾ.

ರಾಷ್ಟ್ರ ಪುನರ್‌ ನಿರ್ಮಾಣದ ಕಲ್ಪನೆ ಸಾಕಾರವಾಗಲಿ.ವೇಣೂರಿನಲ್ಲಿ ಉದ್ಯೋಗ ನೈಪುಣ್ಯ ತರಬೇತಿ ಶಿಬಿರ ಉದ್ಘಾಟಿಸಿ ಶಾಸಕ ಪೂಂಜಾ.
Facebook
Twitter
LinkedIn
WhatsApp

ಬೆಳ್ತಂಗಡಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘಚಾಲಕರಾದ ಮೋಹನ್ ಭಾಗವತ್‌ರ ಕಲ್ಪನೆ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ಚಿಂತನೆಯ ಸ್ವಾವಲಂಬಿ-ಸ್ವಾಭಿಮಾನಿ ಭಾರತ್ ನಿರ್ಮಾಣವನ್ನು ದೃಷ್ಟಿಯಲ್ಲಿರಿಸಿ; ಯುವಕರಿಗೆ ಅವರವರ ಊರುಗಳಲ್ಲೇ ಸ್ವ-ಉದ್ಯೋಗ ಮಾಡಲು ಅವಕಾಶ ಕಲ್ಪಿಸಲು ಈ ಉದ್ಯೋಗ ನೈಪುಣ್ಯ ತರಬೇತಿ ಶಿಬಿರ ಪೂರಕ. ನಮ್ಮ ಜಿಲ್ಲೆಯಲ್ಲಿ ಈಗಾಗಲೇ ಉದ್ಯೋಗ ನೈಪುಣ್ಯ ತರಬೇತಿ ಪಡೆದ ಸುಮಾರು 4,000ಯುವಕರ ಪೈಕಿ ಸುಮಾರು 1,200ಯುವಕರು ತಮ್ಮತಮ್ಮ ಊರುಗಳಲ್ಲೇ ಸ್ವ-ಉದ್ಯೋಗ ಆರಂಭಿಸಿ ಸ್ವಾವಲಂಬಿ ಬದುಕು ಕಟ್ಟಿಕೊಂಡಿದ್ದಾರೆ. ಆ ಮೂಲಕ ರಾಷ್ಟ್ರ ಪುನರ್ ನಿರ್ಮಾಣ ಕಾರ್ಯಕ್ಕೆ ಕೈಜೋಡಿಸಿದ್ದಾರೆ. ಎಲ್ಲರ ಪರಿಶ್ರಮದಿಂದ ರಾಷ್ಟ್ರ ಪುನರ್ ನಿರ್ಮಾಣ ಕಲ್ಪನೆ ಸಾಕಾರಗೊಳ್ಳಲಿ ಎಂದು ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜಾ ಆಶಿಸಿದರು.ಅವರು ನವೆಂಬರ್ 30ರಂದು ವೇಣೂರಿನ ವಿದ್ದೋದಯ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಗ್ರಾಮ ವಿಕಾಸ ಸಮಿತಿ ಮಂಗಳೂರು ವಿಭಾಗ, ಸಹಕಾರ ಭಾರತಿ ದಕ್ಷಿಣ ಕನ್ನಡ ಜಿಲ್ಲೆ, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ಪುತ್ತೂರಿನ ವಿವೇಕಾನಂದ ಪಾಲಿಟೆಕ್ನಿಕ್‌ನ ಸಹಯೋಗದಲ್ಲಿ ಪ್ರಾಥಮಿಕ‌ ಕೃಷಿ ಪತ್ತಿನ ಸಹಕಾರಿ ಸಂಘ ವೇಣೂರು, ನಾರಾವಿ, ಅಳದಂಗಡಿ ಹಾಗೂ ಶಿರ್ಲಾಲು ಇವುಗಳ ಸಂಯುಕ್ತ ನೇತೃತ್ವದಲ್ಲಿ‌ ನಡೆದ ಉದ್ಯೋಗ ನೈಪುಣ್ಯ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಭಾರತಿ ಅಧ್ಯಕ್ಷ ಕೃಷ್ಣ ಪ್ರಸಾದ್ ಮಡ್ತಿಲರ ಅಧ್ಯಕ್ಚತೆಯಲ್ಲಿ ನಡೆದ ಈ ಉದ್ಘಾಟನಾ ಕಾರ್ಯಕ್ರಮದ ವೇದಿಕೆಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರಾದ ಸುಬ್ರಹ್ಮಣ್ಯ ಭರಣಿಕ್, ರಘುನಂದನ್, ಪುತ್ತೂರು ವಿವೇಕಾನಂದ ಪಾಲಿಟೆಕ್ನಿಕ್‌ನ ಪ್ರಸನ್ನ, ವೇಣೂರು ವಿದ್ಯೋದಯ ಶಿಕ್ಷಣ ಸಂಸ್ಥೆಯ ಸಂಚಾಲಕ ಶಿನರಾಮ ಹೆಗ್ಡೆ, ಅಳದಂಗಡಿ ಪ್ರಾಥಮಿಕ‌ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಶಿವ ಭಟ್, ಶಿಬಿರ ಪ್ರಧಾನ ಸಂಯೋಜಕ ಪ್ರತೀಶ್ ಪೂಜಾರಿ ಹೊಸಂಗಡಿ ಉಪಸ್ಥಿತರಿದ್ದರು.ಬೆಳ್ತಂಗಡಿ‌ ಮಂಡಲ ಬಿಜೆಪಿ ಅಧ್ಯಕ್ಷ ಜಯಂತ್ ಕೋಟ್ಯಾನ್, ವೇಣೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶೋಭಾ ಹೆಗ್ಡೆ, ಉಪಾಧ್ಯಕ್ಷ ಅರುಣ್ ಕ್ರಾಸ್ತಾ, ಆರಂಬೋಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಭಾಕರ್, ಅಂಡಿಂಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಮೋಹನ್ ಅಂಡಿಂಜೆ, ಅಳದಂಗಡಿ ಸೊಸೈಟಿಯ ಉಪಾಧ್ಯಕ್ಷ ಸದಾನಂದ ಪೂಜಾರಿ ಉಂಗಿಲಬೈಲು, ವೇಣೂರು ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಂತ್ ಪೂಜಾರಿ ಮತ್ತಿತರ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಗ್ರಾಮ ವಿಕಾಸ ಸಮಿತಿಯ ಮಂಗಳೂರು ವಿಭಾಗ ಸಂಚಾಲಕ ವೆಂಕಟರಮಣ ಹೊಳ್ಳ ದಿಕ್ಸೂಚಿ ಭಾಷಣ ಮಾಡಿದರು. ಸಹಕಾರ ಭಾರತಿ ಬೆಳ್ತಂಗಡಿ ತಾಲೂಕು ಸಮಿತಿಯ ಪ್ರಧಾನ ಕಾರ್ಯದರ್ಶಿ ರಾಜೇಶ್ ಪೆಂರ್ಬುಡ ನಿರೂಪಿಸಿದ ಕಾರ್ಯಕ್ರಮಕ್ಕೆ ಪ್ರಜ್ಞಾ ಪ್ರಭು ಪ್ರಾರ್ಥನೆಯ ಮೂಲಕ ಚಾಲನೆ ನೀಡಿದರು. ಬೆಳ್ತಂಗಡಿ ತಾಲೂಕು ಸಹಕಾರ ಭಾರತಿಯ ಅಧ್ಯಕ್ಷ ಸುಂದರ ಹೆಗ್ಡೆ ಬಿ. ಇ. ಪ್ರಾಸ್ತಾನಿಕ ಮಾತುಗಳೊಂದಿಗೆ ಎಲ್ಲರನ್ನು ಸ್ವಾಗತಿಸಿದರು. ಶಿಬಿರದ ಪ್ರಧಾನ ಸಂಚಾಲಕ ಹೊಸಂಗಡಿ ಪ್ರತೀಶ್ ಪೂಜಾರಿ ವಂದಿಸಿದರು‌.

Latest News

Related Posts