ಧರ್ಮಸ್ಥಳದ ಬೊಳಿಯಾರು ತಾಲೂಕಿನ ಪ್ರಥಮ ಕಂಟೈನ್‌ಮೆಂಟ್ ಝೋನ್

ಧರ್ಮಸ್ಥಳದ ಬೊಳಿಯಾರು ತಾಲೂಕಿನ ಪ್ರಥಮ ಕಂಟೈನ್‌ಮೆಂಟ್ ಝೋನ್
Facebook
Twitter
LinkedIn
WhatsApp

ಬೆಳ್ತಂಗಡಿ: ತಾಲೂಕು ಆಡಳಿತದ ಸೂಚನೆಯಂತೆ 30ಕ್ಕೂ ಅಧಿಕ ಕೊರೊನಾ ಪಾಸಿಟಿವ್ ಪ್ರಕರಣ ಬೆಳಕಿಗೆ ಬಂದ ಧರ್ಮಸ್ಥಳ ಗ್ರಾಮದ ಬೊಳಿಯಾರು ಪ್ರದೇಶವನ್ನು ಕಂಟೈನ್ಮೆಂಟ್ ಝೋನ್ ಎಂದು ಘೋಷಿಸಲಾಗಿದೆ. ಬೊಳಿಯಾರು ಪ್ರದೇಶದವರು ಯಾರು ಕೂಡ ಹೊರಗೆ ಹೋಗುವಂತಿಲ್ಲ. ಸದ್ರಿ ಪ್ರದೇಶಕ್ಕೆ ಪ್ರವೇಶ ನಿಷೇಧಿಸಲಾಗಿದೆ. ಸದ್ರಿ ಪ್ರದೇಶಕ್ಕೆ ಹೋಗುವ ರಸ್ತೆಯನ್ನು ಬಂದ್ ಮಾಡಲಾಗಿದೆ. ದಿನದ ಅಗತ್ಯ ವಸ್ತುಗಳಿಗೆ ಗ್ರಾಮ ಪಂಚಾಯತಿನಿಂದ ಕ್ರಮವಹಿಸಲಾಗುವುದು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯ ಹರ್ಷಿತ್ ಜೈನ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಉಮೇಶ್ ಹಾಗೂ ಸಿಬ್ಬಂದಿಗಳು, ಕಂದಾಯ ಇಲಾಖೆ ಸಿಬ್ಬಂದಿಗಳು, ಪೊಲೀಸ್ ಅಧಿಕಾರಿಗಳು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು, ಹಾಜರಿದ್ದರು. ಸದ್ರಿ ಪ್ರದೇಶದಲ್ಲಿ ಗ್ರಾಮ ಪಂಚಾಯಿತಿನಿಂದ ಹಾಗೂ ಪೊಲೀಸ್ ಇಲಾಖೆಯಿಂದ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.

Latest News

Related Posts