ಬೆಳ್ತಂಗಡಿ: ತಾಲೂಕಿನ ನಾಲ್ಕೂರು ಗ್ರಾಮದಲ್ಲಿ ಕೋವಿಡ್-19 ಸೋಂಕು ಅಟ್ಟಹಾಸದಿಂದ ಕೇಕೆ ಹಾಕುತ್ತಿದ್ದು; ಉಲ್ಬಣಾವಸ್ಥೆಗೆ ತಲುಪಿದ ಕೊರೋನಾ ಸೋಂಕನ್ನು ಹತೋಟಿಗೆ ತರಲು ಗ್ರಾಮಸ್ಥರು ಸಹಕರಿಸಬೇಕು ಎಂದು ಬಳಂಜ ಗ್ರಾಮ ಪಂಚಾಯತ್ ಆಡಳಿತ ವಿನಂತಿಸಿದೆ.ನಾಲ್ಕೂರು ಗ್ರಾಮದ ವ್ಯಾಪ್ತಿಯಲ್ಲಿ ಮುಂದಿನ ಆದೇಶದವರೆಗೆ ಯಾವುದೇ ರೀತಿಯ ಕಾರ್ಯಕ್ರಮವನ್ನು ನಡೆಸುವಂತಿಲ್ಲ. ಸದ್ರಿ ಪ್ರದೇಶದಲ್ಲಿ ವಾಸಿಸುತ್ತಿರುವ ಜನರು ಅನ್ಯ ಗ್ರಾಮಗಳಲ್ಲಿ ನಡೆಯುವ ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸುವಂತಿಲ್ಲ ಮತ್ತು ಕಾರ್ಯಕ್ರಮವನ್ನು ನಡೆಸುವಂತಿಲ್ಲ. ಪ್ರತಿಯೊಬ್ಬರು ತಮ್ಮ ತಮ್ಮ ಮನೆಯಲ್ಲಿದ್ದು ಸರ್ಕಾರದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವುದು. ಈಗಾಗಲೇ ಕ್ವಾರೈಂಟೆನ್ ನಲ್ಲಿ ಇರುವವರು ತಮ್ಮ ಮನೆ ಬಿಟ್ಟು ಬೇರೆ ಬೇರೆ ಕಡೆ ತೆರಳುತ್ತಿದ್ದಾರೆ ಎಂಬ ವಿಚಾರ ಪಂಚಾಯತ್ ಗಮನಕ್ಕೆ ಬಂದಿದ್ದು, ಕೋವಿಡ್ ನಿಯಮ ಉಲ್ಲಂಘಿಸಿದಲ್ಲಿ ಅಂತಹ ವ್ಯಕ್ತಿಗಳ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಆಶಾ ಕಾರ್ಯಕರ್ತರು ಮತ್ತು ಗ್ರಾಮದ ಮಟ್ಟದ ಕೋರನಾ ಕಾರ್ಯಪಡೆಯ ಸಿಬ್ಬಂದಿಗಳು ಬಂದಾಗ ಸೂಕ್ತ ರೀತಿಯಲ್ಲಿ ಸ್ಪಂದಿಸುಬೇಕು ಎಂದು ಬಳಂಜ ಗ್ರಾಮ ಪಂಚಾಯಿತ್ ಪ್ರಕಟಣೆಯಲ್ಲಿ ತಿಳಿಸಿದೆ.






