ಬೆಳ್ತಂಗಡಿ: ಮೇ 12ರ ಬೆಳಿಗ್ಗೆಯಿಂದಲೇ ಕೋವಿಡ್ ಜಾಗೃತಿ ಕಾರ್ಯಕ್ರಮಗಳಲ್ಲಿ ತಮ್ಮನ್ನು ತೊಡಗಿಸಿಕೊಂಡ ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀನಿವಾಸ್ ರಾವ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಉಮೇಶ್ ಕೆ. ಹಾಗೂ ಸಿಬ್ಬಂದಿ ವರ್ಗದವರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ನ್ಯಾಯಬೆಲೆ ಅಂಗಡಿ, ದಿನಸಿ ಅಂಗಡಿ, ತರಕಾರಿ ಅಂಗಡಿ, ಹಾಲಿನ ಡೈರಿ ಹಾಗೂ ನಂದಿನಿ ಹಾಲಿನ ಡೈರಿಗೆ ಭೇಟಿ ನೀಡಿ, ಅಲ್ಲಿನ ಗ್ರಾಹಕರಿಗೆ ವೈಯಕ್ತಿಕ ಸ್ವಚ್ಛತೆ, ಮಾಸ್ಕ್ ಸರಿಯಾಗಿ ಧರಿಸುವಿಕೆ, ವೈಯಕ್ತಿಕ ಅಂತರ ಕಾಪಾಡುವಿಕೆ ಹಾಗೂ ಸ್ಯಾನಿಟೈಸರ್ ಬಳಕೆಯ ಬಗ್ಗೆ ಮಾಹಿತಿ ನೀಡಿದರು. ಅಂಗಡಿ ಹಾಗೂ ಮಳಿಗೆಗಳ ಮಾಲೀಕರಿಗೂ ಕೋವಿಡ್-19 ನಿಯಮ ಪಾಲನೆಯ ಬಗ್ಗೆ ವಿವರಿಸಲಾಯಿತು.






