ಬೆಳ್ತಂಗಡಿ: ದಕ್ಷಿಣ ಕನ್ನಡಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾದ ಬೆಂಗಳೂರಿನ ಉದ್ಯಮಿ ದೇವೇಂದ್ರ ಹೆಗ್ಡೆ ಕೊಕ್ರಾಡಿ ಅವರು ಮೇ 21ರಂದು ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಸುಮಾರು 3ಲಕ್ಷ ರೂಪಾಯಿ ಮೌಲ್ಯದ ಪಿಪಿಇ ಕಿಟ್, ಸರ್ಜಿಕಲ್ ಗ್ಲೌಸ್, ಮಾಸ್ಕ್, ಸ್ಯಾನಿಟೈಜರ್ ಹಾಗೂ ಇನ್ನಿತರ ವೈದ್ಯಕೀಯ ಬಳಕೆಗೆ ಬೇಕಾಗುವ ಸಾಮಗ್ರಿಗಳನ್ನು ಕೊಡುಗೆಯಾಗಿ ನೀಡಿದರು.ಬೆಳ್ತಂಗಡಿ ತಾಲೂಕು ವೈದ್ಯಾಧಿಕಾರಿ ಡಾl ಕಲಾಮಧು ವೈದ್ಯಕೀಯ ಪರಿಕರಗಳನ್ನು ಸ್ವೀಕರಿಸಿ, ದೇವೇಂದ್ರ ಹೆಗ್ಡೆ ಅವರಿಗೆ ಕೃತಜ್ಞತೆ ಸಲ್ಲಿಸಿದರು.ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜ, ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್ ಈ ಸಂದರ್ಭ ಉಪಸ್ಥಿತರಿದ್ದರು.






