ಆಕ್ಸೀಜನ್ ಘಟಕ ಕಾಮಗಾರಿಗೆ ಶಿಲಾನ್ಯಾಸ

ಆಕ್ಸೀಜನ್ ಘಟಕ ಕಾಮಗಾರಿಗೆ ಶಿಲಾನ್ಯಾಸ
Facebook
Twitter
LinkedIn
WhatsApp

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕೇಂದ್ರದ ಸರಕಾರಿ ಆಸ್ಪತ್ರೆಗೆ ರಾಜ್ಯ ಸರ್ಕಾರದ ರೂಪಾಯಿ 82ಲಕ್ಷ ವಿಶೇಷ ಅನುದಾನದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ ಆಕ್ಸಿಜನ್ ಘಟಕ ಕಾಮಗಾರಿಗೆ ಮೇ 24ರಂದು ಕರ್ನಾಟಕ ಸರಕಾರದ ಮುಜರಾಯಿ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯರುಗಳಾದ ಪ್ರತಾಪ್‌ಸಿಂಹ ನಾಯಕ್ ಮತ್ತು ಶ್ರೀ ಹರೀಶ್ ಕುಮಾರ್, ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷೆ ರಜನಿ ಕುಡ್ವ, ಉಪಾಧ್ಯಕ್ಷ ಜಯಾನಂದ ಗೌಡ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Latest News

Related Posts