ಬೆಳ್ತಂಗಡಿ : ಕಳಿಯ ಗ್ರಾಮದ ಗೇರುಕಟ್ಟೆ ಪಲ್ಲಿದಳಿಕೆ ನಿವಾಸಿಯಾಗಿರುವ ಬೆಳ್ತಂಗಡಿ ಸಾಮಾಜಿಕ ಅರಣ್ಯ ವಲಯದ ಅರಣ್ಯ ವೀಕ್ಷಕ ಬಾಲಕೃಷ್ಣ ಗೌಡ (40) ರವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ.3 ರಂದು ವರದಿಯಾಗಿದೆ.ಬಾಲಕೃಷ್ಣ ಗೌಡರವರು ಬೆಳ್ತಂಗಡಿ ಸಾಮಾಜಿಕ ಅರಣ್ಯ ವಲಯದಲ್ಲಿ ಅರಣ್ಯ ವೀಕ್ಷಕರಾಗಿ ಕರ್ತವ್ಯನಿರ್ವಹಿಸುತ್ತಿದ್ದು, ಎರಡು ತಿಂಗಳ ಹಿಂದೆ ವಿವಾಹವಾಗಿದ್ದರು.ಇಂದು ಬೆಳಿಗ್ಗೆ ಮನೆಯ ಪಕ್ಕದ ಗುಡ್ಡ ಪ್ರದೇಶದಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಯಾವ ಕಾರಣಕ್ಕಾಗಿ ಈ ಕೃತ್ಯವೆಸಗಿದ್ದಾರೆ ಎಂಬುವುದು ತನಿಖೆಯಿಂದ ತಿಳಿದುಬರಬೇಕಾಗಿದೆ.ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






