ಬೆಳ್ತಂಗಡಿ: ಕೋವಿಡ್-19 ಎರಡನೆಯ ಅಲೆಯ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಲಾಕ್‌ಡೌನ್ ಘೋಷಿಸಿದ ಹಿನ್ನಲೆಯಲ್ಲಿ ರಾಜ್ಯದ ಮುಖ್ಯಮಂತ್ರಿಗಳಾದ ಬಿ. ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರ 1,250 ಕೋಟಿ ರೂಪಾಯಿಗಳ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿರುವುದು ಸಾಮಾನ್ಯ ವರ್ಗದ ಜನರಿಗೆ ತುಂಬಾ ಸಹಕಾರಿಯಾಗಿದ್ದು, ಕರಾವಳಿ ಜನತೆಯ ಪರವಾಗಿ ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜ ರಾಜ್ಯದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪನವರಿಗೆ ಅನಂತ ವಂದನೆಗಳನ್ನು ಸಲ್ಲಿಸಿದ್ದಾರೆ.ಕರ್ನಾಟಕ ರಾಜ್ಯದ ಇತರ ಪ್ರದೇಶಗಳಿಗಿಂತ ಭೌಗೋಳಿಕವಾಗಿ ಬಿನ್ನವಾಗಿರುವ ಕರಾವಳಿ ಜನತೆ ವಿಭಿನ್ನ ರೀತಿಯ ಸಂಕಷ್ಟಕ್ಕೊಳಗಾಗಿದ್ದು, ನಮ್ಮ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಖಾಸಗಿ ಬಸ್ಸುಗಳು ಸಂಚರಿಸುವುದರಿಂದ ಅವುಗಳಲ್ಲಿ ದುಡಿಯುತ್ತಿರುವ ಚಾಲಕರು, ನಿರ್ವಾಹಕರು, ಖಾಸಗಿ ಶಿಕ್ಷಣ ಸಂಸ್ಥೆಗಳ ಭೋದಕ ಮತ್ತು ಭೋದಕೇತರ ಸಿಬ್ಬಂದಿಗಳು, ಪುರೋಹಿತ ವರ್ಗದವರು, ಧರ್ಮದೈವಗಳ ಪರಿಚಾರಕರು, ಹೋಟೆಲ್ ಕಾರ್ಮಿಕರು, ಕಲ್ಯಾಣ ಮಂಟಪ ಮತ್ತು ದ್ವನಿ-ಬೆಳಕು-ಶಾಮಿಯಾನದಲ್ಲಿ ದುಡಿಯುವ ಕಾರ್ಮಿಕ ವರ್ಗದವರು, ಗೇರುಬೀಜ ಕಾರ್ಖಾನೆ, ಬೀಡಿ ಮತ್ತು ಇನ್ನಿತರ ವಲಯಗಳಲ್ಲಿ ದುಡಿಯುವ ಕಾರ್ಮಿಕ ವರ್ಗದ ಜನರು ಲಾಕ್‌ಡೌನ್‌ನಿಂದಾಗಿ ತೊಂದರೆಯನ್ನು ಅನುಭವಿಸುತ್ತಿದ್ದಾರೆ ಎಂಬ ವಿಚಾರವನ್ನು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪರಿಗೆ ಮನವರಿಕೆ ಮಾಡಿರುವ ಶಾಸಕ ಹರೀಶ್ ಪೂಂಜ, ಜೂನ್ 3ರಂದು ಬೆಂಗಳೂರಿನಲ್ಲಿರುವ ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪರನ್ನು ಭೇಟಿಯಾಗಿ, ದಕ್ಷಿಣ ಕನ್ನಡ ಜಿಲ್ಲೆಯ ಈ ಎಲ್ಲಾ ಶ್ರಮಿಕ ವರ್ಗಕ್ಕೆ ಹೆಚ್ಚುವರಿಯಾಗಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕಾಗಿ ಮನವಿ ಸಲ್ಲಿಸಿದರು.






