ಬೆಳ್ತಂಗಡಿ: ಬೆಳ್ತಂಗಡಿಯ ಶ್ರೀ ಗುರುದೇವ ವಿವಿಧೊದ್ಧೇಶ ಸಹಕಾರಿ ಸಂಘದ ವತಿಯಿಂದ ಬೆಳ್ತಂಗಡಿಯ ಸರಕಾರಿ ಆಸ್ಪತ್ರೆಗೆ ಕೋವಿಡ್-19 ನಿಯಂತ್ರಣ ಸಾಮಾಗ್ರಿಗಳಾದ ಎನ್-95 ಮಾಸ್ಕ್, ಟ್ರಿಪಲ್ ಲೇಯರ್ ಮಾಸ್ಕ್, ಪೇಸ್ ಶೀಲ್ಡ್, ಪಲ್ಸ್ ಆಕ್ಸಿಮಿಟರ್ ಸಾಮಾಗ್ರಿಗಳನ್ನು ಹಸ್ತಾಂತರಿಲಾಯಿತು. ಸಂಘದ ಅಧ್ಯಕ್ಷರಾದ ಎನ್ ಪದ್ಮನಾಭ ಮಾಣಿಂಜ ರವರು ಅಗತ್ಯ ಸಾಮಾಗ್ರಿಗಳನ್ನು ವಿತರಿಸಿ ಮಾತನಾಡಿ, ವಾರಿಯರ್ಸ್ ಆಗಿ ದುಡಿಯುತ್ತಿರುವ ಆಸ್ಪತ್ರೆಯ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರ ಶ್ರಮ, ಪ್ರಾಮಾಣಿಕ ಸೇವೆಗೆ ಅಭಿನಂದನೆಗಳು ಮತ್ತು ಕೃತಜ್ಣತೆಗಳನ್ನು ಅರ್ಪಿಸಿದರು. ಕಳೆದ ವರ್ಷ ಸಂಘದಿಂದ ರೂ.50000/- ಕೋವಿಡ್ ನಿಧಿಯನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡಿದ್ದು, ಈ ವರ್ಷ ತಾಲೂಕಿನ ಆಸ್ಪತ್ರೆಗಳಿಗೆ ಅಗತ್ಯ ಸಾಮಾಗ್ರಿಗಳನ್ನು ವಿತರಿಸುವ ಬಗ್ಗೆ ನಿರ್ಧರಿಸಿರುತ್ತೇವೆ ಎಂದರು. ನಿರ್ದೇಶಕರಾದ ಮಾಜಿ ಶಾಸಕ ಕೆ. ವಸಂತ ಬಂಗೇರ ಮಾತನಾಡಿ, ನಮ್ಮ ದೇಶ ಕೊರೋನ ಮುಕ್ತವಾಗಲಿ, ಕೋವಿಡ್ ಸಂದರ್ಭದಲ್ಲಿ ಸೇವೆ ಸಲ್ಲಿಸುತ್ತಿರುವ ವಾರಿಯರ್ಸ್ಗಳ ಕಾರ್ಯವೈಖರಿಯನ್ನು ಶ್ಲಾಘಿಸಿದರು. ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಭಗೀರಥ ಜಿ, ಶೇಖರ ಬಂಗೇರ, ವಿಶೇಷಾಧಿಕಾರಿ ಯಂ. ಮೋನಪ್ಪ ಪೂಜಾರಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ಅಶ್ವತ್ಥ್ ಕುಮಾರ್, ಕೇಂದ್ರ ಕಚೇರಿ ವ್ಯವಸ್ಥಾಪಕರಾದ ಕೀರ್ತನ್ ಕುಮಾರ್, ತಾಲೂಕು ಆಸ್ಪತ್ರೆ ಆರೋಗ್ಯಾಧಿಕಾರಿ ಡಾl ವಿದ್ಯಾವತಿ, ಡಾl ಚಂದ್ರಕಾಂತ್, ಡಾl ಶಶಿಕಾಂತ್ ಡೋಂಗ್ರೆ, ಡಾl ಯೋಗೀಶ್, ಡಾl ರಶ್ಮೀ ಪಾರ್ಮಸಿ ಅಧಿಕಾರಿ ಚಂದ್ರಶೇಖರ್, ಆಸ್ಪತ್ರೆಯ ಅಧಿಕಾರಿಗಳು ಮತ್ತು ಸಂಘದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.






