ಬೆಳ್ತಂಗಡಿ: ಧರ್ಮಸ್ಥಳ ಕನ್ಯಾಡಿಯ ಸೇವಾಭಾರತಿಯ ಅಂಗಸಂಸ್ಥೆಯಾದ ಕೊಕ್ಕಡ ಗ್ರಾಮದ ಸೌತಡ್ಕ ಸೇವಾಧಾಮ ಪುನಶ್ಚೇತನ ಕೇಂದ್ರದಲ್ಲಿ ಸೇವಾಭಾರತಿಯ ಸಲಹಾ ಸಮಿತಿ ಸದಸ್ಯರು ಹಾಗೂ ಮಕ್ಕಳ ರಕ್ಷಣಾ ನೀತಿಯ ಅಧ್ಯಕ್ಷೆ ಮನೋರಮಾ ಭಟ್ ಮಕ್ಕಳ ರಕ್ಷಣಾ ನೀತಿಯ ಬಗ್ಗೆ ಸೇವಾಭಾರತಿಯ ಸಿಬ್ಬಂದಿಗಳು ಮತ್ತು ಸೇವಾಧಾಮದ ಶಿಬಿರಾರ್ಥಿಗಳು ಹಾಗೂ ಪೋಷಕರಿಗೆ ಜಾಗೃತಿಯನ್ನು ಮೂಡಿಸಿ ಕಾನೂನು ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಈ ಕಾರ್ಯಕ್ರಮದಲ್ಲಿ ಸೇವಾಭಾರತಿಯ ಸಿಬ್ಬಂದಿ ಹಾಗೂ ಮಕ್ಕಳ ರಕ್ಷಣಾ ನೀತಿಯ ಸದಸ್ಯರಾದ ಮೋಹನ್ ಎಸ್., ಸೇವಾಭಾರತಿ ಫಂಡ್ ರೈಸಿಂಗ್ ಮ್ಯಾನೇಜರ್ ಚರಣ್ ಕುಮಾರ್ ಎಮ್. ಉಪಸ್ಥಿತರಿದ್ದರು. ಸೇವಾಭಾರತಿಯ ಪ್ರೋಗ್ರಾಮ್ ಮ್ಯಾನೇಜರ್ ಅಖಿಲೇಶ್ ಎ. ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಜಾಗೃತಿ ಕಾರ್ಯಕ್ರಮದಲ್ಲಿ ಸೇವಾಧಾಮದ ಶಿಬಿರಾರ್ಥಿಗಳು ಮತ್ತು ಅವರ ಪೋಷಕರು ಹಾಗೂ ಸೇವಾಭಾರತಿ ಸಿಬ್ಬಂದಿವರ್ಗ ಭಾಗವಹಿಸಿದರು.






