ಕಲ್ಲಬೆಟ್ಟು: ಕಲ್ಲಬೆಟ್ಟು ವ್ಯ. ಸೇ. ಸ. ಸಂಘ (ನಿ.) ಕಲ್ಲಬೆಟ್ಟು ಇದರ ವತಿಯಿಂದ ಇಂದು ನಡೆದ ಕೋವಿಡ್ ಲಸಿಕೆ ಅಭಿಯಾನದಲ್ಲಿ ಮಾಜಿ ಸಚಿವರಾದ ಕೆ. ಅಭಯಚಂದ್ರ ಜೈನ್ ಭೇಟಿ ನೀಡಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಕಲ್ಲಬೆಟ್ಟು ವ್ಯ ಸೇ ಸ ಬ್ಯಾಂಕ್ ಇದರ ಅಧ್ಯಕ್ಷ ಪ್ರವೀಣ್ ಕುಮಾರ್ ಜೈನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಲೇರಿಯನ್ ಸಿಕ್ವೇರಾ , ಪುರಸಭಾ ಸದಸ್ಯ ಜೊಸ್ಸಿ ಮಿನೇಜಾಸ್, ಬ್ಲಾಕ್ ವಕ್ತಾರ ರಾಜೇಶ್ ಕಡಲಕೆರೆ, ದಿಲೀಪ್ ಕುಮಾರ್ ಶೆಟ್ಟಿ ಮುಂತಾದವರು ಹಾಜರಿದ್ದರು. ಎಂ.ಸಿ.ಎಸ್. ಬ್ಯಾಂಕ್ ಅಧ್ಯಕ್ಷ ಎಂ. ಬಾಹುಬಲಿ ಪ್ರಸಾದ್, ಕಲ್ಲಬೆಟ್ಟು ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ಆಲ್ವಿನ್ ಮಿನೇಜಸ್, ಪುರಸಭಾ ಉಪಾಧ್ಯಕ್ಷೆ ಸುಜಾತ, ಮಾಜಿ ಪುರಸಭಾ ಸದಸ್ಯ ದಿನೇಶ್ ಪೂಜಾರಿ ಮಾರೂರು, ಹರೀಶ್ ಎಂ.ಕೆ. ಮತ್ತಿತರ ಗಣ್ಯರೂ ಭೇಟಿ ನೀಡಿ ಪರಿಶೀಲನೆ ನಡೆಸಿದರು.






