ಬೆಳ್ತಂಗಡಿ: ವಿದ್ಯೆಯಿಂದ ಸ್ವತಂತ್ರರಾಗಿರಿ, ಸಂಘಟನೆಯಿಂದ ಬಲಯುತರಾಗಿರಿ ಎಂಬ ನಾರಾಯಣಗುರುಗಳ ಸಂದೇಶದಂತೆ ಈಗಾಗಲೇ ಹಲವಾರು ಸಮಾಜಮುಖಿ ಕಾರ್ಯಕ್ರಮಗಳಲ್ಲಿ ಗುರುತಿಸಿಕೊಂಡಿರುವ ಯುವವಾಹಿನಿ (ರಿ) ಬೆಳ್ತಂಗಡಿ ಘಟಕವು ದಾನಿಗಳ ನೆರವಿನಿಂದ ಗುರುದೇವ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಾಂಗ ಮಾಡುತ್ತಿರುವ ಗುರಿಪಳ್ಳದ ಎಣೀರು ನಿವಾಸಿ ಜಯಂತಿ ಇವರ ಮಗಳಾದ ಸಂಜನಾ ಇವಳ ಒಂದು ವರ್ಷದ ಸಂಪೂರ್ಣ ಶೈಕ್ಷಣಿಕ ವೆಚ್ಚವನ್ನು ಘಟಕದ ಅಧ್ಯಕ್ಷರಾದ ಎಂ. ಕೆ. ಪ್ರಸಾದ್ ಇವರು ಕಾಲೇಜು ಆಡಳಿತ ಮಂಡಳಿಗೆ ಹಸ್ತಾಂತರಿಸಿದರು, ಈ ಸಂಧರ್ಭದಲ್ಲಿ ಗುರುದೇವ ಕಾಲೇಜಿನ ಅಧ್ಯಕ್ಷರು ಹಾಗೂ ಮಾಜಿ ಶಾಸಕರಾದ ಕೆ. ವಸಂತ ಬಂಗೇರ, ಕಾರ್ಯದರ್ಶಿಯಾದ ಧರ್ಮವಿಜೇತ್, ಪ್ರೀತಿತ ಧರ್ಮವಿಜೇತ್, ಸಂಜೀವ ಕಣೇಕಲ್, ಬಿನುತ ಬಂಗೇರಾ, ಯುವವಾಹಿನಿ (ರಿ) ಬೆಳ್ತಂಗಡಿ ಘಟಕದ ನಿಯೋಜಿತ ಅಧ್ಯಕ್ಷೆ ಸುಜಾತ ಅಣ್ಣಿ ಪೂಜಾರಿ, ಘಟಕದ ಕಾರ್ಯದರ್ಶಿಗಳಾದ ಗುರುರಾಜ್ ಗುರಿಪಳ್ಳ , ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರವೀಣ್ ಕುದ್ಯಾಡಿ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸುಕೇಶ್ ಕುಮಾರ್, ಘಟಕದ ಮಾಜಿ ಅಧ್ಯಕ್ಷರು ಹಾಗೂ ಉಪಾನ್ಯಾಸಕ ರಾಕೇಶ್ ಮೂಡುಕೋಡಿ, ಘಟಕದ ಸಲಹೆಗಾರರು ಹಾಗೂ ಉಪಾನ್ಯಾಸಕ ಗಣೇಶ್ ಬಿ. ಶಿರ್ಲಾಲು ಹಾಗೂ ಕಾಲೇಜಿನ ಇತರ ಉಪನ್ಯಾಸಕರು, ಸಿಬ್ಬಂದಿವರ್ಗದವರು, ಪೋಷಕರು ಉಪಸ್ಥಿತರಿದ್ದರು.






