ಕಾಂಗ್ರೇಸ್ ವತಿಯಿಂದ ಸ್ವಯಂಪ್ರೇರಿತ ರಕ್ತದಾನ ಶಿಬಿರ

ಕಾಂಗ್ರೇಸ್ ವತಿಯಿಂದ ಸ್ವಯಂಪ್ರೇರಿತ ರಕ್ತದಾನ ಶಿಬಿರ
Facebook
Twitter
LinkedIn
WhatsApp

ಬೆಳ್ತಂಗಡಿ: ಭಾರತ ರಾಷ್ಟ್ರೀಯ ಕಾಂಗ್ರೇಸ್ ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೇಸ್ ಸಮಿತಿ ಮತ್ತು ನಗರ ಬ್ಲಾಕ್ ಕಾಂಗ್ರೇಸ್ ಸಮಿತಿಯ ಜಂಟಿ ಆಶ್ರಯದಲ್ಲಿ; ಸರಕಾರಿ ವೆನ್ಲಾಕ್ ಆಸ್ಪತ್ರೆ ಮಂಗಳೂರು, ಇಂಡಿಯನ್ ರೆಡ್‌ಕ್ರಾಸ್ ಸಮಿತಿ ಮತ್ತು ಲೇಡಿಗೊಷನ್ ಆಸ್ಪತ್ರೆ ಮಂಗಳೂರು ಇವರ ಸಹಕಾರದಲ್ಲಿ; ಬೆಳ್ತಂಗಡಿ ಗ್ರಾಮೀಣ ಮತ್ತು ನಗರ ಬ್ಲಾಕ್ ಕಾಂಗ್ರೇಸ್‌ನ ವಿವಿಧ ಘಟಕಗಳ ಸಹಭಾಗಿತ್ವದಲ್ಲಿ ಜೂನ್ 11ರಂದು ಬೆಳ್ತಂಗಡಿಯ ಶ್ರೀ ಗುರುನಾರಾಯಣ ಸಭಾಭವನದಲ್ಲಿ‌ ನಡೆದ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಬೆಳ್ತಂಗಡಿಯ ಮಾಜಿ ಶಾಸಕ ವಸಂತ ಬಂಗೇರ ಉದ್ಘಾಟಿಸಿದರು.ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಶಾಸಕ ಕೆ. ಹರೀಶ್ ಕುಮಾರ್, ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಶೈಲೇಶ್ ಕುಮಾರ್ ಕುರ್ತೋಡಿ, ಗ್ರಾಮೀಣ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ರಂಜನ್ ಜಿ. ಗೌಡ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶೇಖರ್ ಕುಕ್ಕೇಡಿ ಹಾಗೂ ನಿಮಿತಾ ಚಾರ್ಮಾಡಿ, ಬೆಳ್ತಂಗಡಿ ಪಟ್ಟಣ ಪಂಚಾಯತ್ ಸದಸ್ಯರಾದ ಜಗದೀಶ್ ಡಿ. ಮತ್ತು ಜನಾರ್ದನ, ಬೆಳಾಲು ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ದಿನೇಶ್ ಕೋಟ್ಯಾನ್, ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳಾದ ಅಶ್ರಫ್ ನೆರಿಯ, ದಯಾನಂದ ಬೆಳಾಲು, ವಿನ್ಸೆಂಟ್ ಮಡಂತ್ಯಾರು, ಅಬ್ದುಲ್ ರೆಹಮಾನ್ ಪಡ್ಪು ಮತ್ತಿತರರು ಉಪಸ್ಥಿತರಿದ್ದರು.

Latest News

Related Posts