ಬಿಜೆಪಿಯ ತತ್ವ ಸಿದ್ಧಾಂತಗಳತ್ತ ಮಹಿಳೆಯರ ಒಲವು: ಪೂಂಜ

ಬಿಜೆಪಿಯ ತತ್ವ ಸಿದ್ಧಾಂತಗಳತ್ತ ಮಹಿಳೆಯರ ಒಲವು: ಪೂಂಜ
Facebook
Twitter
LinkedIn
WhatsApp

ಬೆಳ್ತಂಗಡಿ: ಶ್ರೇಷ್ಠ ವ್ಯಕ್ತಿಗಳ ಸಾಧನೆಗೆ ಮಹಿಳೆಯರೇ ಸ್ಪೂರ್ತಿದಾಯಕರು. ಸನಾತನ ಸಂಸ್ಕೃತಿ ಮತ್ತು ಬಿಜೆಪಿ ತತ್ವ ಸಿದ್ಧಾಂತಗಳಿಂದ  ಮಹಿಳೆಯರು ಬಿಜೆಪಿಯತ್ತ ಒಲವು ತೋರ್ಪಡಿಸಿದ್ದು ಪಕ್ಷಕ್ಕೆ ಶಕ್ತಿ ತುಂಬಿದೆ. ಕೊರೊನಾ ಸಂದರ್ಭದಲ್ಲಿ ಸಮಾಜ ಸೇವೆ ಮಾಡಿದ ಮಹಿಳಾ ಮೋರ್ಛಾದ ಕಾರ್ಯ ಅಭಿನಂದನೀಯ ಎಂದು ಶಾಸಕ ಹರೀಶ್ ಪೂಂಜಾ ಹೇಳಿದರು.ಅವರು ಲಾಯಿಲ ಶ್ರೀ  ಸುಬ್ರಹ್ಮಣ್ಯ ಸ್ಥಾನಿಕ ಸಭಾಭವನದಲ್ಲಿ ಜುಲೈ 21ರಂದು ನಡೆದ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಛಾದ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.ರಾಜ್ಯ ಮತ್ತು ರಾಷ್ಟ ರಾಜಕಾರಣದಲ್ಲಿ ವಿದೇಶಾಂಗ ಸಚಿವೆಯಂತಹ ದೊಡ್ಡ ಹುದ್ದೆಯನ್ನು ನೀಡಿದ ಏಕೈಕ ಪಕ್ಷ ಬಿಜೆಪಿ. ಇಂದು ಜಿಲ್ಲೆಯಲ್ಲಿ ಅನೇಕ ಮಹಿಳೆಯರು ಬಿಜೆಪಿಯಲ್ಲಿ ಉನ್ನತ ಸ್ಥಾನವನ್ನು ಪಡೆದಿದ್ದು, ಇದಕ್ಕೆ ನಮ್ಮ ಜಿಲ್ಲೆಯ ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆಯವರೇ ಸಾಕ್ಷಿಯಾಗಿದ್ದಾರೆ. ಮಹಿಳಾ ಘಟಕವು ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಯ ಜೊತೆಗೆ ಸಮಾಜ ಸೇವೆಗೆ ಮುಂದಾಗಲಿ ಎಂದರು.ಜಿಲ್ಲಾ ಮಹಿಳಾ ಮೋರ್ಛಾದ ಅಧ್ಯಕ್ಷೆ ಧನಲಕ್ಷಿ ಗಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಹಿಳೆಯರು ಸಮಾಜದಲ್ಲಿ ಸಾಧನೆ ಮಾಡಬೇಕಾದರೆ ಸಂಘಟನೆ ಅಗತ್ಯ. ಇದಕ್ಕಾಗಿ ಭಾರತೀಯ ಜನತಾ ಪಾರ್ಟಿ ಮಹಿಳೆಯರಿಗೆ ಉತ್ತಮ ಅವಕಾಶವನ್ನು ನೀಡಿದ್ದು ಇದರಿಂದ ಆತ್ಮವಿಶ್ವಾಸ ತುಂಬಿದೆ. ಸ್ವಾವಲಂಬಿ ಬದುಕಿಗೆ ಮಹಿಳೆಯರಿಗೆ ಭಾರತೀಯ ಜನತಾಪಾರ್ಟಿಯ ಕೊಡುಗೆ ಅಪಾರವಾದುದು ಎಂದರು.ಇದೇ ಸಂದರ್ಭದಲ್ಲಿ ಪ್ರಮಿಳಾ ಭಟ್ ಹಾಗೂ ಕುತ್ಲೂರು ರಾಮಚಂದ್ರ ಭಟ್ ದಂಪತಿಯನ್ನು ಗೌರವಿಸಲಾಯಿತು. ಕುತ್ಲೂರು ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ 700ಗಿಡ ನೆಟ್ಟು ಪೋಷಿಸಿದ ನಿಟ್ಟಿನಲ್ಲಿ ಸನ್ಮಾನಿಸಲಾಯಿತು. ಹಾಗೂ ಲಾಕ್‌ಡೌನ್ ಅವಧಿಯಲ್ಲಿ 300ಮಂದಿ ನಿರಾಶ್ರಿತರಿಗೆ ತಾಲೂಕು ಮಹಿಳಾ ಮೋರ್ಛಾ ಕಾರ್ಯದರ್ಶಿ ಮಮತಾ ಕೇಶವ್ ಅವರು ಊಟ ಹಾಗೂ ಉಪಚಾರ ನೀಡಿರುವ ಸಲುವಾಗಿ ಅವರನ್ನು ಗೌರವಿಸಲಾಯಿತು.ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಸ್ತೂರಿ ಪಂಜ, ಸೇವಾಂತ ಶ್ರೀಯಾನ್, ಮಹಿಳಾ ಮೋರ್ಛಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಸುವರ್ಣ, ಜಿಲ್ಲಾ ಮಹಿಳಾ ಮೋರ್ಛಾ ಪ್ರಭಾರಿ ಪೂಜಾ ಪೈ, ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಗಣೇಶ್ ನಾವುರ, 9 ಮಂಡಲದ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.ಮಹಾನಗರ ಪಾಲಿಕೆ ಸದಸ್ಯೆ ಪೂರ್ಣಿಮ ಎಂ. ಸ್ವಾಗತಿಸಿದರು. ಮಹಿಳಾ ಮೋರ್ಛಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೇವಂತಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.             

Latest 5

Related Posts