ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಮಡಂತ್ಯಾರು ವಲಯ ಹಾಗೂ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸಹಭಾಗಿತ್ವದಲ್ಲಿ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸುತ್ತ ಮುತ್ತ ಆಗಸ್ಟ್ 3ರಂದು ಸ್ವಚ್ಚತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ ಹಾಗೂ ವ್ಯವಸ್ಥಾಪನಾ ಸಮಿತಿಯ ಸದಸ್ಯರು, ಕುವೆಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪ್ರದೀಪ್ ಶೆಟ್ಟಿ, ಒಕ್ಕೂಟದ ಅಧ್ಯಕ್ಷೆ ಸುಮಂಗಳ ಪ್ರಭು, ಮೇಲ್ವಿಚಾರಕ ಮಧು ಕಿರಣ್, ಸ್ವಚ್ಚತಾ ಸೇನಾನಿ ಜಯರಾಮ್ ಶೆಟ್ಟಿ, ಸೇವಾಪ್ರತಿನಿದಿಗಳು ಹಾಗೂ ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದರು






