ಎಸ್‌ಎಸ್‌ಎಲ್‌ಸಿಯಲ್ಲಿ 621 ಅಂಕ ಪಡೆದ ಅನಘಗೆ ಡಿಸಿಯಿಂದ ಅಭಿನಂದನೆ

ಎಸ್‌ಎಸ್‌ಎಲ್‌ಸಿಯಲ್ಲಿ 621 ಅಂಕ ಪಡೆದ ಅನಘಗೆ ಡಿಸಿಯಿಂದ ಅಭಿನಂದನೆ
Facebook
Twitter
LinkedIn
WhatsApp

ಬೆಳ್ತಂಗಡಿ: ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮಾ ಶಾಲೆಯ ವಿದ್ಯಾರ್ಥಿನಿ ಅನಘ ಪ್ರಸಕ್ತ ಶೈಕ್ಷಣಿಕ ವರ್ಷ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಒಟ್ಟು 625 ಅಂಕಗಳಲ್ಲಿ 621ಅಂಕಗಳನ್ನು ಪಡೆದಿದ್ದಾರೆ. ಆಗಸ್ಟ್ 10ರ ಮಂಗಳವಾರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾl ರಾಜೇಂದ್ರ ಕೆ. ವಿ. ಅವರು ಅನಘನನ್ನು ಮಂಗಳೂರು ಕಚೇರಿಯಲ್ಲಿ ಅಭಿನಂದಿಸಿದರು.ಅನಘ ಅವರು ಬೆಳ್ತಂಗಡಿ ತಾಲೂಕು ಕಂದಾಯ ಇಲಾಖೆಯಲ್ಲಿ ಬೆಳ್ತಂಗಡಿ ಕಸಬಾ ಗ್ರಾಮದ ಗ್ರಾಮ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸತೀಶ್‌ರಾಜ್ ಹಾಗೂ ಧರ್ಮಸ್ಥಳ ಶಾಂತಿವನದಲ್ಲಿ ಫಿಸಿಯೋತೆರೆಪಿಸ್ಟ್ ಆಗಿರುವ ಮಂಜುಳಾ ದಂಪತಿಯ ಪುತ್ರಿ.ಕಂದಾಯ ಇಲಾಖೆಯ ವಾಟ್ಸಾಪ್ ಗ್ರೂಫ್‌ನಲ್ಲಿ ಅನಘ ಅವರಿಗೆ ಶುಭಾಶಯ ಸಲ್ಲಿಸಿದ್ದನ್ನು ಗಮನಿಸಿದ ಜಿಲ್ಲಾಧಿಕಾರಿಯವರು ಬೆಳ್ತಂಗಡಿ ತಹಸೀಲ್ದಾರ್ ಮಹೇಶ್ ಜೆ. ಅವರಿಗೆ ಕರೆ ಮಾಡಿ ಅನಘ ಹಾಗೂ ಅವರ ಹೆತ್ತವರನ್ನು ಕಚೇರಿಗೆ ಕಳುಹಿಸುವಂತೆ ಸೂಚಿಸಿದ್ದರು. ಅಂತೆಯೇ ಆಗಸ್ಟ್ 10ರಂದು ಮಂಗಳೂರಿನ ಡಿಸಿ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳು ಅನಘ ಅವರನ್ನು ಅಭಿನಂದಿಸಿ, ಗೌರವಿಸಿದರು.

Latest 5

Related Posts