ಎಂ.ಎಸ್. ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಡಾl ಅಂಕಿತಾ ಭಟ್

ಎಂ.ಎಸ್. ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಡಾl ಅಂಕಿತಾ ಭಟ್
Facebook
Twitter
LinkedIn
WhatsApp

ಬೆಳ್ತಂಗಡಿ: ಉಜಿರೆಯ ಬೆನಕ ಹೆಲ್ತ್ ಸೆಂಟರಿನ ಡಾl ಗೋಪಾಲಕೃಷ್ಣ ಮತ್ತು ಡಾl ಭಾರತೀ ಜಿ. ಕೆ.ಯವರ ಪುತ್ರಿ ಡಾl ಅಂಕಿತಾ ಜಿ. ಭಟ್ ಅವರು ಬೆಂಗಳೂರಿನ ಪ್ರತಿಷ್ಠಿತ ಗವರ್ನಮೆಂಟ್ ಮೆಡಿಕಲ್ ಕಾಲೇಜು ಬಿ.ಎಂ.ಸಿ.ಆರ್.ಐ. ಯಲ್ಲಿ ಎಂ.ಎಸ್. ಓ.ಬಿ.ಜಿ.(ಪ್ರಸೂತಿ ಮತ್ತು ಸ್ತ್ರೀರೋಗ) ವಿಭಾಗದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಪದವಿ ಗಳಿಸಿರುತ್ತಾರೆ.            ಅಂಕಿತಾ ಜಿ. ಭಟ್ ಅವರು ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ .ಪ್ರಾಥಮಿಕ ಶಿಕ್ಷಣ, ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರೌಢ ಶಿಕ್ಷಣ ಪಡೆದು ಎಸ್.ಎಸ್.ಎಲ್.ಸಿ. ಯಲ್ಲಿ  ತಾಲೂಕಿಗೆ ಪ್ರಥಮ ಸ್ಥಾನ ಪಡೆದರು. ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಪಿ.ಯು.ಸಿ. ಶಿಕ್ಷಣ ಪಡೆದು, ಸಿ.ಇ.ಟಿ. ಪರೀಕ್ಷೆಯಲ್ಲಿ ರಾಜ್ಯಕ್ಕೆ 47ನೇ ಸ್ಥಾನ ಗಳಿಸಿ  ಮಂಗಳೂರಿನ ಪ್ರತಿಷ್ಠಿತ ಕೆ.ಎಂ.ಸಿ. ಮೆಡಿಕಲ್ ಕಾಲೇಜಿನಲ್ಲಿ ಎಂ.ಬಿ.ಬಿ.ಎಸ್. ವ್ಯಾಸಂಗ ಮುಗಿಸಿದರು.  ಪಿ.ಜಿ. ನೀಟ್ ಪರೀಕ್ಷೆಯಲ್ಲಿ  ದೇಶಕ್ಕೆ 1400ನೇ ಸ್ಥಾನ ಪಡೆದು ಬೆಂಗಳೂರಿನ ಪ್ರತಿಷ್ಠಿತ ಗವರ್ನಮೆಂಟ್ ಮೆಡಿಕಲ್ ಕಾಲೇಜು- ಬಿ.ಎಂ.ಸಿ.ಆರ್‌.ಐ.ಯಲ್ಲಿ ಎಂ.ಎಸ್‌., ಓ.ಬಿ.ಜಿ  ವ್ಯಾಸಂಗ ಮುಗಿಸಿದ್ದಾರೆ.  ಪ್ರಸ್ತುತ ಉಜಿರೆಯ ಬೆನಕ ಹೆಲ್ತ್ ಸೆಂಟರ್‌ನಲ್ಲಿ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞ ವೈದ್ಯೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.  ಕರ್ನಾಟಕ ಶಾಸ್ತ್ರೀಯ ಸಂಗೀತದಲ್ಲಿ ಜೂನಿಯರ್ ಮತ್ತು ಸೀನಿಯರ್ ಪರೀಕ್ಷೆಯಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದು ಉತ್ತಮ ಗಾಯಕಿಯಾಗಿಯೂ ಗುರುತಿಸಲ್ಪಟ್ಟಿದ್ದಾರೆ.

Latest 5

Related Posts