ರಾಷ್ಟ್ರ ನಾಯಕರ ಜನ್ಮ ದಿನಾಚರಣೆ

ರಾಷ್ಟ್ರ ನಾಯಕರ ಜನ್ಮ ದಿನಾಚರಣೆ
Facebook
Twitter
LinkedIn
WhatsApp

ಬೆಳ್ತಂಗಡಿ: ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿಯಲ್ಲಿ ರಾಷ್ಟ್ರ ನಾಯಕರಾದ ಮಹಾತ್ಮಾ ಗಾಂಧಿ ಹಾಗೂ ಲಾಲ್‌ಬಹದ್ದೂರ್ ಶಾಸ್ತ್ರೀಜಿಯವರ ಜಯಂತಿ ಜನ್ಮದಿನವನ್ನು ಆಚರಿಸಲಾಯಿತು. ಶಾಲಾ ಅಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ಜಿನೇಂದ್ರ ಕುಮಾರ್ ಜೈನ್ ಅವರು ಈರ್ವರು ಮಹಾತ್ಮರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ಕೊಟ್ಟರು. ತದನಂತರ ಎಲ್ಲ ಪೋಷಕರ ಸಹಕಾರದಿಂದ ಶಾಲಾ ಆವರಣದಲ್ಲಿ ಸ್ವಚ್ಛತೆಯನ್ನು ಮಾಡಲಾಯಿತು. ಶಾಲಾ ಮಕ್ಕಳು ಸರ್ವಧರ್ಮ ಪ್ರಾರ್ಥನೆಯನ್ನು ನಡೆಸಿಕೊಟ್ಟರು. ಪಾರಾಸ್ ಪೃಥ್ವಿ ಜುವೆಲ್ಲರ್ಸ್ ಬೆಳ್ತಂಗಡಿ ಇಲ್ಲಿನ ಸಿಬ್ಬಂದಿವರ್ಗದವರು ಈ ಕಾರ್ಯಕ್ರಮಕ್ಕೆ ಸಹಕರಿಸಿ ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಜೊತೆಗೆ ಶಾಲಾ ಮುಖ್ಯಶಿಕ್ಷಕ ಎಚ್. ಎಂ. ಸುರೇಶ್, ಶಾಲಾಭಿವೃದ್ಧಿ ಸಮಿತಿಯ ಸದಸ್ಯ ಅಬ್ದುಲ್ ಲತೀಫ್, ವಿದ್ಯಾರ್ಥಿಗಳ ಪೋಷಕರು ಮತ್ತು ಮಕ್ಕಳು ಹಾಗೂ ಶಿಕ್ಷಕರು ಭಾಗವಹಿಸಿದ್ದರು.

Latest 5

Related Posts