ಮಂಗಳೂರು ವಿ.ವಿ.ಯಿಂದ ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸಾಧನೆ

ಮಂಗಳೂರು ವಿ.ವಿ.ಯಿಂದ ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸಾಧನೆ
Facebook
Twitter
LinkedIn
WhatsApp

‘ಬೆಳ್ತಂಗಡಿ: ಮಂಗಳೂರು ವಿಶ್ವವಿದ್ಯಾಲಯವಿಂದು ಕ್ರೀಡೆಯಲ್ಲಿ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿಗಳಿಸಲು ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿ ಬರುವ ಕಾಲೇಜುಗಳ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಸಿಬ್ಬಂದಿವರ್ಗ, ದೈಹಿಕ ಶಿಕ್ಷಣ ನಿರ್ದೇಶಕರು ಹಾಗೂ ವಿದ್ಯಾರ್ಥಿಗಳ ಶ್ರಮವೇ ಕಾರಣ ಎಂದು ಮಂಗಳೂರು ವಿಶ್ವವಿದ್ಯಾಲಯದ ಕುಲಸಚಿವ ಡಾ. ಕಿಶೋರ್ ಕುಮಾರ್ ಸಿ. ಕೆ. ಹೇಳಿದರು.ಅವರು ಡಿಸೆಂಬರ್ 8ರಂದು ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನ ಒಳಾಂಗಣ ಕ್ರೀಡಾಂಗಣದಲ್ಲಿ‌ ಧರ್ಮಸ್ಥಳ ರತ್ನವರ್ಮ ಹೆಗ್ಗಡೆ ಪರ್ತಾಯ ಫಲಕಕ್ಕಾಗಿ ನಡೆದ ಮಂಗಳೂರು ವಿ.ವಿ. ಅಂತರ್ ಕಾಲೇಜು ಕಬ್ಬಡ್ಡಿ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.ಇಂದು ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಕಾಲೇಜುಗಳಲ್ಲಿ‌ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ದೊರೆಯುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರಕಾರಗಳು ಕ್ರೀಡೆಗೆ ಹೆಚ್ಚಿನ ಉತ್ತೇಜನ ನೀಡುತ್ತಿದೆ. ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿ, ಉತ್ತಮ ಕ್ರೀಡಾಪಟುಗಳಾಗಿ ಮೂಡಿಬರಬೇಕು ಎಂದು ಆಶಿಸಿದರು.ಮಡಂತ್ಯಾರು ಸೇಕ್ರೆಡ್ ಹಾರ್ಟ್ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ವಂದನೀಯ ಬೇಸಿಲ್ ವಾಸ್‌ರ ಅಧ್ಯಕ್ಷತೆಯಲ್ಲಿ ನಡೆದ ಕಬಡ್ಡಿ ಪಂದ್ಯಾಟದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಂಗಳೂರು ವಿಭಾಗದ ಕಾಲೇಜು ಶಿಕ್ಷಣದ ಸಹನಿರ್ದೇಶಕಿ ಜೆನ್ನಿಫರ್ ಲೊಲಿಟಾ, ಕಾಲೇಜಿನ ಹಿರಿಯ ವಿದ್ಯಾರ್ಥಿ ರೊನಾಲ್ಡ್ ಸಿಲ್ವನ್ ಡಿ’ಸೋಜಾ, ಮಂಗಳೂರು ವಿಶ್ವವಿದ್ಯಾಲಯದ ಕ್ರೀಡಾ ನಿರ್ದೇಶಕ ಡಾ. ಜೆರಾಲ್ಡ್ ಸಂತೋಷ್ ಡಿ’ಸೋಜಾ, ಏಕಲವ್ಯ ಪ್ರಶಸ್ತಿ ವಿಜೇತ ಕಬಡ್ಡಿ ಆಟಗಾರ ಬಿ‌. ಉದಯ ಚೌಟ ಮಾತನಾಡಿ ಕ್ರೀಡಾಕೂಟಕ್ಕೆ ಶುಭಹಾರೈಸಿದರು.ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ ಎಂ. ಸಂಜೀವ ಶೆಟ್ಟಿ, ಡೆನ್ನಿಸ್ ಫೆರ್ನಾಂಡಿಸ್ ಹಾಗೂ ಬೀನಾ ಫೆರ್ನಾಂಡಿಸ್‌ರನ್ನು ಗುರುತಿಸಿ ಸಮಾರಂಭದಲ್ಲಿ ಸಮ್ಮಾನಿಸಲಾಯಿತು. ಮಡಂತ್ಯಾರು ಎಂ. ಆರ್. ಸುಪಾರಿಯ ಮಾಲಕ ಹೈದರ್, ಕಾಲೇಜಿನ ಪ್ರಾಂಶುಪಾಲ ಡಾ. ಎನ್‌. ಎಂ. ಜೋಸೆಫ್, ಪಂದ್ಯಾಟದ ಸಂಘಟನಾ ಕಾರ್ಯದರ್ಶಿ ಅಲೆಕ್ಸ್ ಐವನ್ ಸಿಕ್ವೇರಾ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಫ್ರಾನ್ಸಿಸ್ ವಿ. ವಿ‌., ಕಾಲೇಜಿನ ಶಾರೀರಿಕ ಶಿಕ್ಷಣ ನಿರ್ದೇಶಕ ಪ್ರಕಾಶ್ ಡಿ’ಸೋಜಾ, ನಿವೃತ್ತ ಉಪನ್ಯಾಸಕಿ ತ್ರಿಶಾಲಾ ಜೈನ್, ವೇದಿಕೆಯಲ್ಲಿ ಉಪಸ್ಥಿತರಿದ್ದರು. ಉಪನ್ಯಾಸಕ ನೆಲ್ಸನ್ ಮೋನಿಸ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಡಾ. ಎಂ. ಎನ್. ಜೋಸೆಫ್ ಸ್ವಾಗತಿಸಿದರು. ಉಪನ್ಯಾಸಕರಾದ ಅಲೆಕ್ಸ್ ಐವನ್ ಸಿಕ್ವೇರಾ ವಂದಿಸಿದರು.

Latest 5

Related Posts