ಬೆಳ್ತಂಗಡಿ: ಡಿಸೆಂಬರ್ 13ರಂದು ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್‌ರ ಅಧ್ಯಕ್ಷತೆಯಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ 2020-21ನೇ ಸಾಲಿನ ಮಹಾಸಭೆಯಲ್ಲಿ 2020-21ನೇ ವರದಿ ಸಾಲಿನಲ್ಲಿ ಆರ್ಥಿಕ ವ್ಯವಹಾರದಲ್ಲಿ ಅತ್ಯುತ್ತಮ ಸಾಧನೆ ತೋರಿದ ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಪರವಾಗಿ ಅಧ್ಯಕ್ಷ ಸತೀಶ್ ಕಾಶಿಪಟ್ಣ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲತೀಫ್‌ರನ್ನು ಪ್ರಶಸ್ತಿ ನೀಡಿ ಪುರಸ್ಕರಿಸಿ, ಅಭಿನಂದಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್, ನಿರ್ದೇಶಕರಾದ ನಿರಂಜನ ಬಾವಂತಬೆಟ್ಟು, ಭಾಸ್ಕರ ಕೋಟ್ಯಾನ್ ಸಹಿತ ಇತರ ನಿರ್ದೇಶಕರು ಉಪಸ್ಥಿತರಿದ್ದರು.






