ಬಂಗಾಡಿ ಸೊಸೈಟಿಗೆ ಪ್ರಶಸ್ತಿಗಳ ಗರಿ

ಬಂಗಾಡಿ ಸೊಸೈಟಿಗೆ ಪ್ರಶಸ್ತಿಗಳ ಗರಿ
Facebook
Twitter
LinkedIn
WhatsApp

ಬೆಳ್ತಂಗಡಿ ತಾಲೂಕಿನ ಬಂಗಾಡಿ ವ್ಯವಸಾಯಿಕ ಸಂಘವು ಅತ್ಯುತ್ತಮ ಕಾರ್ಯ ನಿರ್ವಹಣೆಗಾಗಿ ರಾಜ್ಯ ಅಪೆಕ್ಸ್ ಬ್ಯಾಂಕ್ ವತಿಯಿಂದ ರಾಜ್ಯಮಟ್ಟದ ಪ್ರಶಸ್ತಿ ಹಾಗೂ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಲೆಕ್ಕ ಪರಿಶೋಧನೆಯಲ್ಲಿ ‘ಎ’ ತರಗತಿ ಗಳಿಸಿದ ಸಹಕಾರಿ ಸಂಘಗಳ ಪೈಕಿ ತೃತೀಯ ಅತ್ಯುತ್ತಮ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಎಂಬ ಹೆಗ್ಗಳಿಕೆಯನ್ನು ಜಿಲ್ಲಾ ಡಿಸಿಸಿ ಬ್ಯಾಂಕ್ ವತಿಯಿಂದ ಪಡೆದಿದೆ.ಈ ಪ್ರಶಸ್ತಿಗಳನ್ನು ಡಿಸೆಂಬರ್ 14 ರಂದು ಮಂಗಳೂರಿನಲ್ಲಿ ಜರಗಿದ ಡಿಸಿಸಿ ಬ್ಯಾಂಕ್‌ನ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷ ಹರೀಶ್ ಸಾಲಿಯಾನ್ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಯಾನಂದ ಶೆಟ್ಟಿಗಾರ್ ಅವರಿಗೆ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಹಸ್ತಾಂತರಿಸಿದರು. ಡಿಸಿಸಿ ಬ್ಯಾಂಕಿನ ನಿರ್ದೇಶಕರಾದ ನಿರಂಜನ ಬಾವಂತಬೆಟ್ಟು ಸಹಿತ ಇತರ ನಿರ್ದೇಶಕರುಗಳು ಉಪಸ್ಥಿತರಿದ್ದರು.

Latest 5

Related Posts