ಪದ್ಮುಂಜ ಸೊಸೈಟಿಗೆ ಪ್ರಶಸ್ತಿಯ ಹಿರಿಮೆ

ಪದ್ಮುಂಜ ಸೊಸೈಟಿಗೆ ಪ್ರಶಸ್ತಿಯ ಹಿರಿಮೆ
Facebook
Twitter
LinkedIn
WhatsApp

ಬೆಳ್ತಂಗಡಿ: 2020-21ನೇ ಆರ್ಥಿಕ ವರ್ಷದಲ್ಲಿ ಸಾಲ ವಸೂಲಾತಿ ಸಹಿತ ಎಲ್ಲ ವ್ಯವಹಾರಗಳಲ್ಲಿ ಅತ್ಯುತ್ತಮ ಸಾಧನೆ ತೋರಿದ ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಯನ್ನು ಗುರುತಿಸಿ ಡಿಸೆಂಬರ್ 14ರಂದು ಮಂಗಳೂರಿನಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ ಸಹಕಾರಿ ಬ್ಯಾಂಕಿನ ಮಹಾಸಭೆಯಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಈ ಪ್ರತಿಷ್ಢಿತ ಪ್ರಶಸ್ತಿಯನ್ನು ಸಂಘ ಅಧ್ಯಕ್ಷ ಪಿ. ರಕ್ಷಿತ್ ಶೆಟ್ಟಿ ಹಾಗು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉಮೇಶ್ ಪಡ್ಡಿಲ್ಲಾಯರಿಗೆ ನೀಡಿ ಪುರಸ್ಕರಿಸಿದರು. ಬ್ಯಾಂಕಿನ ನಿರ್ದೇಶಕರಾದ ಬಾವಂತಬೆಟ್ಟು ನಿರಂಜನ್ ಸಹಿತ ಸಹಕಾರಿ ಕ್ಷೇತ್ರದ ಪ್ರಮುಖರು ಉಪಸ್ಥಿತರಿದ್ದರು.

Latest 5

Related Posts