ಹೆಡ್ ಕಾನ್‌ಸ್ಟೇಬಲ್ ವಿಜಯ ಕುಮಾರ್‌ರಿಗೆ ಮುಖ್ಯಮಂತ್ರಿ ಪದಕ

ಹೆಡ್ ಕಾನ್‌ಸ್ಟೇಬಲ್ ವಿಜಯ ಕುಮಾರ್‌ರಿಗೆ ಮುಖ್ಯಮಂತ್ರಿ ಪದಕ
Facebook
Twitter
LinkedIn
WhatsApp

ಮೂಲತಾ ಬೆಳ್ತಂಗಡಿಯವರಾದ, ಪ್ರಸ್ತುತ ಉಡುಪಿಯಲ್ಲಿ ಪೊಲೀಸ್ ಹೆಡ್‌ಕಾನ್‌ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿತುರ ಬಿ. ವಿಜಯ ಕುಮಾರ್‌ರವರು ಇಲಾಖೆಯಲ್ಲಿ ಸಲ್ಲಿಸಿದ ಅನುಪಮ ಸೇವೆಯನ್ನು ಗುರುತಿಸಿದ ರಾಜ್ಯ ಗೃಹ ಇಲಾಖೆ ಅವರನ್ನು ಪ್ರಸಕ್ತ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಎಪ್ರಿಲ್ 2ರ ಪೊಲೀಸ್ ಧ್ವಜ ದಿನಾಚರಣೆಯಂದು ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಬಿ. ವಿಜಯ ಕುಮಾರ್‌ರವರಿಗೆ ಪ್ರಧಾನ ಮಾಡಿ ಗೌರವಿಸಿದರು.

ರಾಜ್ಯದ ಗೃಹ ಸಚಿವ ಅರಗ ಜ್ಞಾನೇಂದ್ರ ಮತ್ತು ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು. ಪೊಲೀಸ್ ಹೆಡ್‌ ಕಾನ್‌ಸ್ಟೇಬಲ್ ಬಿ. ವಿಜಯ ಕುಮಾರ್‌ರವರು ಬೆಳ್ತಂಗಡಿಯ ಬಿ. ಗೋಪಾಲಕೃಷ್ಣ ಮತ್ತು ಶಾರದಾ ದಂಪತಿಗಳ ಪುತ್ರ ಹಾಗೂ ಬೆಳ್ತಂಗಡಿಯ ರಾಮಕ್ಷತ್ರಿಯ ಸಂಘದ ಅಧ್ಯಕ್ಷ ಚಂದ್ರಕಾಂತ್‌ರವರ ಕಿರಿಯ ಸಹೋದರ.

Latest 5

Related Posts