ನಿವೃತ್ತ ಶಿಕ್ಷಕರಿಗೆ ಅಭಿವಂದನೆ

ನಿವೃತ್ತ ಶಿಕ್ಷಕರಿಗೆ ಅಭಿವಂದನೆ
Facebook
Twitter
LinkedIn
WhatsApp

ಬೆಳ್ತಂಗಡಿ: ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆಯ ಪದವೀಧರೇತರ ಮುಖ್ಯ ಶಿಕ್ಷಕ ಮೋನಪ್ಪ ಕೆ., ಗಾರ್ಡಿಯನ್ ಏಂಜೆಲ್ ಅನುದಾನಿತ ಶಾಲೆ ಮಡಂತ್ಯಾರು ಇಲ್ಲಿನ ಮುಖ್ಯ ಶಿಕ್ಷಕಿ ಜೆಸಿಂತಾ ಮೆಟಿಲ್ಡಾ ಲೊಬೊ ಮತ್ತು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಸೋಣಂದೂರು ಇಲ್ಲಿನ ಸಹಶಿಕ್ಷಕಿ ವಿಜಯಲಕ್ಷ್ಮಿ ಈ ಮೂರು ಮಂದಿ ನಿವೃತ್ತ ಶಿಕ್ಷಕರಿಗೆ ಪುಂಜಾಲಕಟ್ಟೆ ಸಮೂಹ ಸಂಪನ್ಮೂಲ ಕೇಂದ್ರದ ಸಮಸ್ತ ಶಿಕ್ಷಕರ ಪರವಾಗಿ ಅಭಿಮಾನ ಪೂರ್ವಕವಾಗಿ ಸಮ್ಮಾನಿಸಿ ಅಭಿವಂದಿಸಲಾಯಿತು.ಈ ಸಂದರ್ಭದಲ್ಲಿ ಕರ್ನಾಟಕ ಪಬ್ಲಕ್ ಸ್ಕೂಲ್ ಪುಂಜಾಲಕಟ್ಟೆಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಜಯರಾಮ್ ಶೆಟ್ಟಿ, ಸೇಕ್ರೆಡ್ ಹಾರ್ಟ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಎಂ. ಎನ್. ಜೋಸೆಫ್, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಭುವನೇಶ್, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಬೆಳ್ತಂಗಡಿ ತಾಲೂಕು ಶಾಖೆಯ ಅಧ್ಯಕ್ಷ ಜಯರಾಜ್ ಜೈನ್, ಪುಂಜಾಲಕಟ್ಟೆ ಸಮೂಹ ಸಂಪನ್ಮೂಲ ವ್ಯಕ್ತಿ ಚೇತನಾ, ಮಚ್ಚಿನ ಶಾಲೆಯ ಮುಖ್ಯ ಶಿಕ್ಷಕ ವಿಠಲ್, ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆಯ ಪ್ರಭಾರ ಮುಖ್ಯ ಶಿಕ್ಷಕ ಸುರೇಶ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.ರಘುಪತಿ.ಕೆ ರಾವ್ ಕಾರ್ಯಕ್ರಮ ನಿರೂಪಿಸಿದ ಕಾರ್ಯಕ್ರಮದಲ್ಲಿ ಚೇತನಾ ಸ್ವಾಗತಿಸಿ, ಕರುಣಾಕರ್ ವಂದಿಸಿದರು.

Latest 5

Related Posts