ಬೆಳ್ತಂಗಡಿ: ಕೇಂದ್ರ ಸರಕಾರದಿಂದ ರಾಜ್ಯಸಭೆಯ ಸದಸ್ಯರಾಗಿ ನಾಮನಿರ್ದೇಶನಗೊಂಡ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಉಜಿರೆಯ ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಬೀಡಿನಲ್ಲಿ ಅಭಿನಂದಿಸಲಾಯಿತು. ಸಂಘದ ಅಧ್ಯಕ್ಷ ಶ್ರೀಧರ್ ಜಿ. ಭಿಡೆ, ಉಪಾಧ್ಯಕ್ಷ ಅನಂತ ಭಟ್ ಮಚ್ಚಿಮಲೆ, ನಿರ್ದೇಶಕರಾದ ಸೋಮನಾಥ ಬಂಗೇರ ವರ್ಪಾಳೆ, ರಾಮ ನಾಯ್ಕ, ಅಬ್ರಹಾಂ ಅರಸಿನಮಕ್ಕಿ, ಬಾಲಕೃಷ್ಣ ಗೌಡ ಕೇರಿಮಾರು, ಜಯಶ್ರೀ ಡಿ. ಎಂ. ಗೌಡ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜು ಶೆಟ್ಟಿ ಉಪಸ್ಥಿತರಿದ್ದರು.






