ಮೂಡುಬಿದಿರೆ: ಬಂಟರ ಸಂಘ ಮೂಡುಬಿದಿರೆ ಇದರ ವತಿಯಿಂದ ಬಂಟ ಸಮಾಜ ಬಾಂಧವರ ಸಭೆ, ಪ್ರತಿಭಾ ಪುರಸ್ಕಾರ, ಸಮ್ಮಾನ ಮತ್ತು ವಿದ್ಯಾರ್ಥಿವೇತನ ವಿತರಣೆ ಕಾರ್ಯಕ್ರಮವು ಸಂಘದ ಅಧ್ಯಕ್ಷ ತಿಮ್ಮಯ್ಯ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಹೋಟೆಲ್ ಪಂಚರತ್ನ ಇಂಟರ್‌ನ್ಯಾಷನಲ್ ಸಭಾಭವನದಲ್ಲಿ ಆಗಸ್ಟ್ 6ರಂದು ಸಂಜೆ ನೆರವೇರಿತು.ಬಂಟರ ಮಾತೃಸಂಘ ಮಂಗಳೂರು ಇದರ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಮತ್ತು ಜಾಗತಿಕ ಬಂಟರ ಸಂಘದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿಯವರು ಜೊತೆಗೂಡಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಬಂಟ ಸಮಾಜದ ದಾಖಲೆ 400ಕ್ಕೂ ಹೆಚ್ಚು ಬಡಕುಟುಂಬದ ವಿದ್ಯಾರ್ಥಿಗಳಿಗೆ ಸುಮಾರು 9ರೂಪಾಯಿ ಲಕ್ಷದಷ್ಟು ವಿದ್ಯಾರ್ಥಿವೇತನವನ್ನು ಈ ಸಂದರ್ಭದಲ್ಲಿ ವಿತರಿಸಲಾಯಿತು. ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಪಡೆದ ಬಂಟ ಸಮಾಜದ ವಿದ್ಯಾರ್ಥಿನಿ ನಿಹಾರಿಕಾ ಶೆಟ್ಟಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಪಡೆದ ಸಮಾಜದ ವಿದ್ಯಾರ್ಥಿನಿ ಅನ್ವಿತಾ ಆರ್. ಶೆಟ್ಟಿ ಅವರನ್ನು ಸಭೆಯಲ್ಲಿ ಅಭಿನಂದಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಕೆ.ಪಿ. ಸುಚರಿತ ಶೆಟ್ಟಿಯವರನ್ನು ಸಮ್ಮಾನಿಸಿ ಗೌರವಿಸಲಾಯಿತು. ಜಯಶ್ರೀ ಅಮರನಾಥ ಶೆಟ್ಟಿ, ಶಾಸಕ ಉಮಾನಾಥ ಎ. ಕೋಟ್ಯಾನ್, ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ ಎಂ., ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ರಾಜೇಶ್ ಚೌಟ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಸಂಘದ ಅಧ್ಯಕ್ಷರ ಪತ್ನಿ ಕಾಂತಿಲತಾ ಟಿ. ಶೆಟ್ಟಿ, ಸಂಘದ ಪದಾಧಿಕಾರಿಗಳಾದ ದಿನಕರ ಬಿ. ಶೆಟ್ಟಿ, ಡಾ| ವಿನಯಕುಮಾರ್ ಹೆಗ್ಡೆ, ಮೇಘನಾಥ ಶೆಟ್ಟಿ, ಎಂ. ಪುರುಷೋತ್ತಮ ಶೆಟ್ಟಿ, ದಿವಾಕರ ಶೆಟ್ಟಿ, ಸುರೇಶ್ ಶೆಟ್ಟಿ, ಪ್ರೇಮನಾಥ ಮಾರ್ಲ ಉಪಸ್ಥಿತರಿದ್ದರು. ತೋಡಾರು ದಿವಾಕರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಶಿವಪ್ರಸಾದ್ ಹೆಗ್ಡೆ ಸಮ್ಮಾನ ಪತ್ರ ವಾಚಿಸಿದರು. ಸುರೇಶ್ ಶೆಟ್ಟಿ ವಂದನಾರ್ಪಣೆಗೈದರು.






