ಬಳಂಜ: ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬಳಂಜ: ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
Facebook
Twitter
LinkedIn
WhatsApp

ಬೆಳ್ತಂಗಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಳಂಜ-ನಾಲ್ಕೂರು-ತೆಂಕಕಾರಂದೂರು ಇದರ ವತಿಯಿಂದ ನಡೆಯುವ 35ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ. ವಸಂತ ಸಾಲಿಯಾನ್ ಬಿಡುಗಡೆಗೊಳಿಸಿ ಕಾರ್ಯಕ್ರಮವು ಯಾವುದೇ ಅಡಚಣೆಯಿಲ್ಲದೆ ಸುಸೂತ್ರವಾಗಿ ನಡೆಯಲಿ ಎಂದು ಶುಭಹಾರೈಸಿದರು.ಈ ಸಂದರ್ಭದಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ಸಂತೋಷ್ ಪಿ. ಕೋಟ್ಯಾನ್ ಬಳಂಜ, ಪ್ರಧಾನ ಕಾರ್ಯದರ್ಶಿ ಯಶೋಧರ ಶೆಟ್ಟಿ ಅಟ್ಲಾಜೆ,ಉಪಾಧ್ಯಕ್ಷ ಕರುಣಾಕರ ಹೆಗ್ಡೆ ಬೊಕ್ಕಸ, ಪ್ರಗತಿಪರ ಕೃಷಿಕ ವಿಶ್ವನಾಥ ಹೊಳ್ಳ, ಸಮಿತಿ ಮಾಜಿ ಅಧ್ಯಕ್ಷರುಗಳಾದ ಸಂತೋಷ್ ಕುಮಾರ್ ಕಾಪಿನಡ್ಕ, ದಿನೇಶ್ ಪೂಜಾರಿ ಅಂತರ, ವಿಜಯ ಹೆಗ್ಡೆ ಬಳಂಜ, ಜೊತೆ ಕಾರ್ಯದರ್ಶಿ ಪ್ರವೀಣ್ ಡಿ. ಕೋಟ್ಯಾನ್, ಸಾಂಸ್ಕೃತಿಕ ಕಾರ್ಯದರ್ಶಿ ಶರತ್ ಅಂಚನ್ ಮತ್ತಿತರರು ಹಾಜರಿದ್ದರು.

Latest News

Related Posts