ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಘಟಿಕೋತ್ಸವ

ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಘಟಿಕೋತ್ಸವ
Facebook
Twitter
LinkedIn
WhatsApp

ಬೆಳ್ತಂಗಡಿ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ರಾಷ್ಟ್ರೀಯ ವೃತ್ತಿ ಪ್ರಮಾಣ ಪತ್ರ ವಿತರಣಾ ಸಮಾರಂಭ ಸೆಪ್ಟೆಂಬರ್ 21ರಂದು ನಡೆಯಿತು. ಸಮಾರಂಭದಲ್ಲಿ 2021-22ನೇ ಸಾಲಿನಲ್ಲಿ ಉತ್ತೀರ್ಣರಾದ ವಿದ್ಯಾರ್ಥಿನಿಯರಿಗೆ ವೃತ್ತಿ ಪ್ರಮಾಣ ಪತ್ರ ವಿತರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಉಜಿರೆಯ ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯ ಶಾಖಾಧಿಕಾರಿ ವಸಂತ್ ಟಿ. ವೃತ್ತಿ ಪ್ರಮಾಣ ಪತ್ರ ನೀಡಿ ಶುಭ ಹಾರೈಸಿದರು. ಮತ್ತೋರ್ವ ಅತಿಥಿ ಮಂಗಳೂರು ಸರಕಾರಿ ಮಹಿಳಾ ಕೈಗಾರಿಕಾ ತರಬೇತಿ ಕಾಲೇಜಿನ ಪ್ರಾಂಶುಪಾಲ ಬಾಲಕೃಷ್ಣ ಎ. ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯನಿರ್ವಣಾಧಿಕಾರಿ ಎಂ. ವೈ. ಹರೀಶ್ ವಹಿಸಿದ್ದರು. COPA trade ಮತ್ತು Sewing technologyಯಲ್ಲಿ ಗರಿಷ್ಠ ಅಂಕ ಪಡೆದ ಮತ್ತು ಶೈಕ್ಷಣಿಕ ಸಾಧನೆ ಮಾಡಿದ ವಿದ್ಯಾರ್ಥಿನಿಯರನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಪ್ರಕಾಶ್ ಕಾಮತ್, ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Latest 5

Related Posts