ಉಚಿತ ವೈದ್ಯಕೀಯ ಹಾಗೂ ದಂತ ಚಿಕಿತ್ಸಾ ಶಿಬಿರ

ಉಚಿತ ವೈದ್ಯಕೀಯ ಹಾಗೂ ದಂತ ಚಿಕಿತ್ಸಾ ಶಿಬಿರ
Facebook
Twitter
LinkedIn
WhatsApp

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ನೆರಿಯ ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಸೆಪ್ಟೆಂಬರ್ 25ರಂದು ಮಂಗಳೂರು ದೇರಳೆಕಟ್ಟೆ ಯೆನಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ಹಾಗೂ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ ದೇರಳಕಟ್ಟೆ ಇದರ ಜಂಟಿ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಶಿಬಿರವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು. ಮಂಗಳೂರು ಯೇನಪೋಯ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರದ ಮೆಡಿಕಲ್ ಆಫೀಸರ್ ಡಾ|ಹನಾ ಸಂಶುದ್ದೀನ್, ದಂತವೈದ್ಯೆ ಡಾ| ಪ್ರಕೃತಿ ಶೆಟ್ಟಿ ಹಾಗೂ ಯೆನಪೋಯ ಆಸ್ಪತ್ರೆಯ ವೈದ್ಯರುಗಳ ತಂಡ ಶಿಬಿರಾರ್ಥಿಗಳ ತಪಾಸಣೆ ನಡೆಸಿದರು. 150ಕ್ಕೂ ಅಧಿಕ ಫಲಾನುಭವಿಗಳು ಇದರ ಪ್ರಯೋಜನವನ್ನು ಪಡೆದುಕೊಂಡರು. ಸಿಯೋನ್ ಆಶ್ರಮದ ಮಾನೇಜಿಂಗ್ ಟ್ರಸ್ಟಿ ಡಾ. ಯು.ಸಿ. ಪೌಲೋಸ್‌, ಟ್ರಸ್ಟ್‌ನ ಸದಸ್ಯೆ ಮೇರಿ ಯು.ಪಿ., ವೈದ್ಯರಾದ ಡಾ| ಗೋಪಿಕೃಷ್ಣ, ಸಿಯೋನ್ ಆಶ್ರಮದ ಆಡಳಿತ ಮಂಡಳಿ ಸದಸ್ಯರು ಮತ್ತು ಸಿಬ್ಬದಿವರ್ಗದವರು ಹಾಜರಿದ್ದರು.

Latest 5

Related Posts