ರುಡ್‌ಸೆಟ್‌ ಸಂಸ್ಥೆಯ ವಾರ್ಷಿಕ ವರದಿ ಬಿಡುಗಡೆ

ರುಡ್‌ಸೆಟ್‌ ಸಂಸ್ಥೆಯ  ವಾರ್ಷಿಕ ವರದಿ ಬಿಡುಗಡೆ
Facebook
Twitter
LinkedIn
WhatsApp

ಬೆಳ್ತಂಗಡಿ: ಉಜಿರೆ ರುಡ್‌ಸೆಟ್‌ ಸಂಸ್ಥೆಯ 2023-24ನೇ ಸಾಲಿನ ವಾರ್ಷಿಕ ವರದಿಯನ್ನು ಧರ್ಮಸ್ಥಳದ ಧರ್ಮಾಧಿಕಾರಿಗಳು ಮತ್ತು ರುಡ್‌ಸೆಟ್‌ ಸಂಸ್ಥೆಗಳ ಅಧ್ಯಕ್ಷರೂ ಆದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆ ಗೊಳಿಸಿದರು. ಈ ಸಂದರ್ಭದಲ್ಲಿ ರುಡ್‌ಸೆಟ್‌ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕ ಗಿರಿಧರ್‌ ಕಲ್ಲಾಪುರ, ಉಜಿರೆ ರುಡ್‌ಸೆಟ್‌ ಸಂಸ್ಥೆಯ ನಿರ್ದೇಶಕ ಎಂ. ಸುರೇಶ್‌ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. 2023-24ರ ಸಂಸ್ಥೆಯ ಎಲ್ಲಾ ಚಟುವಟಿಕೆಗಳನ್ನು ಗಮನಿಸಿ ಹೆಗ್ಗಡೆಯವರು ಮೆಚ್ಚುಗೆ ವ್ಯಕ್ತಪಡಿಸಿದರು. ಮುಂದಿನ ವರ್ಷದ ಗುರಿಯನ್ನು ತಲುಪಲು ಕೆಲವು ಮಾರ್ಗದರ್ಶನವನ್ನು ನೀಡಿದರು. ಸಂಸ್ಥೆಯು ಕಳೆದ ವರ್ಷದಲ್ಲಿ 762 ಶಿಭಿರಾರ್ಥಿಗಳಿಗೆ ವಿವಿಧ ತರಬೇತಿಗಳನ್ನು ಕೊಟ್ಟು ಅದರಲ್ಲಿ 577 ಯುವಕ/ಯುವತಿಯರು ಸ್ವಂತ ಉದ್ಯೋಗವನ್ನು ಪ್ರಾರಂಬಿಸಿದ್ದಾರೆ. ಹೊಸ ತರಬೇತಿಗಳಾಗಿ ಕೋಳಿ ಸಾಕಾಣಿಕೆ, ಎಂಬ್ರಾಯಿಡರಿ ಮತ್ತು ಫ್ಯಾಬ್ರಿಕ್‌ ಪೈಂಟಿಂಗ್‌ ಮತ್ತು ಮದುಮಗಳ ಶೃಂಗಾರ ಮೊದಲಾದ ತರಬೇತಿಗಳನ್ನು ಹಮ್ಮಿ ಕೊಂಡಿರುತ್ತೇವೆ. ಕಳೆದ ವರ್ಷದಲ್ಲಿ ಕರ್ನಾಟಕ ಸರಕಾರದ ವಿದಾನಸಭಾ ಅಧ್ಯಕ್ಷ ಯು.ಟಿ. ಖಾದರ್‌ ಮತ್ತು ದೆಹಲಿ ಗ್ರಾಮೀಣ ಸಚಿವಾಲಯದ ನಿರ್ದೇಶಕ ಸಂತೋಷ್‌ ಕುಮಾರ್‌ ತಿವಾರಿ ಸಂಸ್ಥೆಗೆ ಭೇಟಿ ನೀಡಿದ್ದರು. ಜೊತೆಗೆ ಭ್ಯಾಂಕಿನ ಅಧಿಕಾರಿಗಳು, ಉದ್ಯಮಿಗಳು ಮತ್ತು ಸರಕಾರಿ ಉನ್ನತ ಅಧಿಕಾರಿಗಳು ಸಂಸ್ಥೆಗೆ ಭೇಟಿ ನೀಡಿ ಸಂಸ್ಥೆಯ ಕಾರ್ಯ ವೈಖರಿಯನ್ನು ಶ್ಲಾಘಿಸಿದ್ದರು.

Latest 5

Related Posts