ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ
Facebook
Twitter
LinkedIn
WhatsApp

ಬೆಳ್ತಂಗಡಿ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮೇ 24ರಂದು 2023-24ನೇ ಸಾಲಿನ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಜರಗಿತು.ಮುಖ್ಯ ಅತಿಥಿಯಾಗಿ ಭಾಗವಹಿಸಿದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಐಟಿ ಮತ್ತು ಹಾಸ್ಟೆಲ್ ವಿಭಾಗದ ಕಾರ್ಯ ನಿರ್ವಾಹಣಾ ಅಧಿಕಾರಿ ಪೂರಣ್ ವರ್ಮಾ ಮಾತನಾಡಿ; ಸಹೋದ್ಯೋಗಿಗಳು ಮತ್ತು ಸ್ನೇಹಿತರೊಂದಿಗೆ ಉತ್ತಮ ಸಂಪರ್ಕ -ಸಂವಹನ ಬೆಳೆಸಿಕೊಳ್ಳುವುದರಿಂದ ಸತತವಾಗಿ‌ ಬದಲಾಗುತ್ತಿರುವ ತಾಂತ್ರಿಕ ವಿಷಯವನ್ನು ಹಾಗೂ ಅವಕಾಶಗಳನ್ನು ತಿಳಿದುಕೊಳ್ಳಲು ನೆರವಾಗುತ್ತದೆ ಎಂದು ಹೇಳಿದರು.ಮೆಕ್ಯಾನಿಕಲ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಬಸವ ಸ್ವಾಗತಿಸಿದರು. ಅಂತಿಮ ವರ್ಷದ ವಿದ್ಯಾರ್ಥಿಗಳು ತಮ್ಮ ಅನಿಸಿಕೆ ಹಂಚಿಕೊಂಡರು. ಪ್ರಾಚಾರ್ಯ ಡಾ. ಅಶೋಕ್ ಕುಮಾರ್ ವೇದಿಕೆ ಯಲ್ಲಿ ಉಪಸ್ಥಿತರಿದ್ದರು, ಡಾ. ಗಿರೀಶ್ ಕುಮಾರ್ ವಂದನಾರ್ಪಣೆಗೈದರು. ಕಾರ್ಯಕ್ರಮವನ್ನು ಇಲೆಕ್ಟ್ರಾನಿಕ್ಸ್ ವಿಭಾಗದ ಪ್ರೊ. ಸಂದೀಪ್ ನಿರೂಪಿಸಿದರು.

Latest 5

Related Posts