ಡಾ| ಎಲ್.ಎಚ್ ಮಂಜುನಾಥರಿಗೆ ಸಮ್ಮಾನ.

ಡಾ| ಎಲ್.ಎಚ್ ಮಂಜುನಾಥರಿಗೆ ಸಮ್ಮಾನ.
Facebook
Twitter
LinkedIn
WhatsApp

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕದ ಜಂಟಿ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಕಛೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ವೃತ್ತಿಯಿಂದ ವಯೋ ನಿವೃತ್ತರಾಗಲಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯ‌ನಿರ್ವಾಹಕ ನಿರ್ದೇಶಕ ಡಾ| ಎಲ್.ಎಚ್. ಮಂಜುನಾಥರವರನ್ನು ಅಭಿನಂದಿಸಿ, ಸಮ್ಮಾನಿಸಲಾಯಿತು. ಸಮ್ಮಾನವನ್ನು ನೆರವೇರಿಸಿದ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ್ ಮಾತನಾಡಿ; ಡಾ| ಎಲ್.ಎಚ್. ಮಂಜುನಾಥರವರು ಓರ್ವ ಉತ್ತಮ ಓದುಗರೂ ಬರಹಗಾರರೂ ಆಗಿದ್ದಾರೆ. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಬೆಳ್ತಂಗಡಿ ತಾಲೂಕಿನಿಂದ ಕನ್ನಡ ಸಾಹಿತ್ಯ ಪರಿಷತ್ತಿಗೆ ಅತಿ ಹೆಚ್ಚು ಆಜೀವ ಸದಸ್ಯರನ್ನು ನೋಂದಾಯಿಸುವಲ್ಲಿ ಸಹಕಾರ ನೀಡಿದವರು. ಅಲ್ಲದೆ ತಾಲೂಕು ಮತ್ತು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಆಯೋಜನೆಗೆ ಮಾರ್ಗದರ್ಶನದೊಂದಿಗೆ ಸಹಕಾರ ನೀಡಿದವರು. ಇವರ ಸಾಮಾಜಿಕ ಮತ್ತು ಸಾಹಿತ್ಯಕ ಸೇವೆ ನಿರಂತರವಾಗಿರಲಿ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಬೆಳ್ತಂಗಡಿ ತಾಲೂಕು ಅಧ್ಯಕ್ಷ ಡಿ. ಯದುಪತಿ ಗೌಡ, ಗೌರವ ಕಾರ್ಯದರ್ಶಿ ರಾಮಕೃಷ್ಣ ಭಟ್ ಬೆಳಾಲು, ಕೋಶಾಧ್ಯಕ್ಷ ಡಿ. ಧರ್ಣಪ್ಪ ಮತ್ತು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಉಪನ್ಯಾಸಕ ಡಾ. ಡಿ.ಎ. ನಾಗಣ್ಣ ಉಪಸ್ಥಿತರಿದ್ದರು.

Latest 5

Related Posts