ಬೆಳ್ತಂಗಡಿ: ಕಾಶಿಪಟ್ಣ ಸರಕಾರಿ ಪ್ರೌಢ ಶಾಲೆಯಲ್ಲಿ 2024-25ನೇ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವವು ಶಾಲೆಗೆ ಹೊಸದಾಗಿ ದಾಖಲಾದ ವಿದ್ಯಾರ್ಥಿಗಳಿಗೆ ಶಾಲಾಭಿವೃದ್ಧಿ ಸಮಿತಿಯ ಕಾರ್ಯಧ್ಯಕ್ಷ ಯಶೋಧರ ನಲ್ಲರಬೆಟ್ಟು ಹೂಗುಚ್ಛ ನೀಡಿ ಸ್ವಾಗತಿಸುವುದರ ಮೂಲಕ ಉದ್ಘಾಟಿಸಿದರು. ಸರಕಾರದಿಂದ ವಿದ್ಯಾರ್ಥಿಗಳಿಗೆ ಸರಬರಾಜಾದ ಪಠ್ಯಪುಸ್ತಕಗಳನ್ನು ಮತ್ತು ಸಮವಸ್ತ್ರವನ್ನು ಇದೇ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಸದಸ್ಯರು ವಿತರಿಸಿದರು. ಶಾಲಾ ಮುಖ್ಯ ಶಿಕ್ಷಕ ಶಶಿಧರ್ ಕೆ. ಎಲ್ಲರನ್ನು ಸ್ವಾಗತಿಸಿ; 2024-25ನೇ ಶೈಕ್ಷಣಿಕ ವರ್ಷದ ಬಲವರ್ದನೆಗೆ ರೂಪುರೇಷೆಗಳನ್ನು ಪೋಷಕರಿಗೆ ತಿಳಿಯಪಡಿಸಿದರು. ಶಾಲಾ ಶಿಕ್ಷಕ ದೇವುದಾಸ್ ನಾಯಕ್ ಶಾಲಾ ಶಿಸ್ತು, ಸಮವಸ್ತ್ರ ಮತ್ತು ಹತ್ತನೇ ತರಗತಿಯ ವಿಶೇಷ ತರಗತಿಗಳ ಬಗ್ಗೆ ಮಾಹಿತಿಗಳನ್ನು ಹಂಚಿಕೊಂಡರು. ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಶಾಲಾ ಶಿಕ್ಷಕಿ ಹರಿಣಾಕ್ಷಿ ವಂದಿಸಿದರು. ಶಾಲಾ ಶಿಕ್ಷಕಿ ಸೌಮ್ಯ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಶಿಕ್ಷಕ ವೃಂದದ ಸಹಕಾರದೊಂದಿಗೆ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.






