ಬಿಜೆಪಿ ಗೆಲುವು-ಬೆಳ್ತಂಗಡಿಯಲ್ಲಿ ಕಾರ್ಯಕರ್ತರ ಸಂಭ್ರಮಾಚರಣೆ

ಬಿಜೆಪಿ ಗೆಲುವು-ಬೆಳ್ತಂಗಡಿಯಲ್ಲಿ ಕಾರ್ಯಕರ್ತರ  ಸಂಭ್ರಮಾಚರಣೆ
Facebook
Twitter
LinkedIn
WhatsApp

ಬೆಳ್ತಂಗಡಿ: ಭಾರಿ ಕುತೂಹಲ ಕೆರಳಿಸಿರುವ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣಾ ಮತಎಣಿಕೆಯಲ್ಲಿ ಪ್ರಾರಂಭದಿಂದಲೇ ಬಿಜೆಪಿ ಅಭ್ಯರ್ಥಿ ಕ್ಯಾ| ಬೃಜೇಶ್ ಚೌಟ ಮುನ್ನಡೆ ಸಾಧಿಸಿದ್ದು ಅಂತಿಮವಾಗಿ 1,44,522 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಅವರು 7,47,002 ಮತಗಳನ್ನು ಪಡೆದು ಜಿಲ್ಲೆ ಬಿಜೆಪಿಯ ಭದ್ರಕೋಟೆ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಬೆಳ್ತಂಗಡಿಯ ಬಸ್ ನಿಲ್ದಾಣದ ಬಳಿಯಿರುವ ಬಿಜೆಪಿ ಕಚೇರಿ ಮುಂಭಾಗದಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಜಯ ಘೋಷ ಕೂಗಿ ಬಿಜೆಪಿ ಅಭ್ಯರ್ಥಿಯ ಗೆಲುವನ್ನು ಸಂಭ್ರಮಿಸಿದರು. ವಿಧಾನ ಪರಿಷತ್ ಸದಸ್ಯ ಪ್ರತಾಪ್‌ಸಿಂಹ ನಾಯಕ್, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ ಹಾಗೂ ಜಯಾನಂದ ಗೌಡ, ಪಕ್ಷದ ಪ್ರಮುಖರಾದ ಕೊರಗಪ್ಪ ನಾಯ್ಕ್, ವಸಂತಿ ಮಚ್ಚಿನ, ರಾಜೇಶ್ ಪೆರ್ಬುಂಡ, ಗಿರೀಶ್ ಡೋಂಗ್ರೆ ಲಾಯ್ಲ, ಕೊರಗಪ್ಪ ಗೌಡ ಚಾರ್ಮಾಡಿ ಸಹಿತ ಪಕ್ಷದ ನೂರಾರು ಕಾರ್ಯಕರ್ತರು ವಿಜಯೋತ್ಸವದಲ್ಲಿ ಭಾಗವಹಿಸಿದ್ದರು.

Latest 5

Related Posts