ಬೆಳ್ತಂಗಡಿ: ಕುಂದಾಪುರದಲ್ಲಿ ಪಂಚಗಂಗಾವಳಿ ನದಿಯಲ್ಲಿ ಕಳೆದ 14 ವರ್ಷಗಳಿಂದ ಚಿಪ್ಪುಗಳನ್ನು ಸಾಗಿಸುತ್ತಿದ್ದ ‘ಜೈಬಾಲಾಜಿ’ ಹಾಯಿದೋಣಿಯನ್ನು ಜೂನ್ 10ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಂಜುಷಾ ವಸ್ತು ಸಂಗ್ರಹಾಲಯಕ್ಕೆ ಸಲ್ಲಿಸಲಾಯಿತು.ಕುಂದಾಪುರದ ಖಾರ್ವಿಕೇರಿಯ ಜೈಬಾಲಾಜಿ ಎಂಟರ್‌ಪ್ರೈಸಸ್ ಮಾಲಕ ವೆಂಕಟೇಶ್ ಖಾರ್ವಿ ತಮ್ಮ ಹಾಯಿದೋಣಿಯನ್ನು ಮಂಜೂಷಾ ವಸ್ತುಸಂಗ್ರಹಾಲಯಕ್ಕೆ ನೀಡಿದರು.ಸವಿವರ ಮಾಹಿತಿ: 51 ಅಡಿ ಉದ್ದ ಹಾಗೂ 10 1/2 ಅಡಿ ಅಗಲದ ಬೃಹತ್ ಹಾಯಿದೋಣಿ ಒಂದೇ ಮರದ ಹಲಗೆಯಿಂದ ನಿರ್ಮಿತವಾಗಿದೆ. ಇದರಲ್ಲಿ 22ಅಡಿ ಎತ್ತರದ ಕಾಟಿಮರ ಮತ್ತು ಹಾಯಿ ಇದೆ. 20 ವರ್ಷಗಳ ಹಿಂದೆ ಇಂತಹ ಹತ್ತು ದೊಣಿಗಳಿದ್ದವು. ಚಿಪ್ಪು, ಮರ, ಹಂಚು ಸಾಗಾಟಕ್ಕೂ ಅವುಗಳು ಬಳಕೆಯಾಗುತ್ತಿದ್ದವು. ಚಿಪ್ಪು ಸದ್ಯ ನಶಿಸುತ್ತಾ ಬಂದಿರುವುದರಿAದ ಮುಂದಿನ ಪೀಳಿಗೆಗೆ ಕೊಂಕಣಿ ಖಾರ್ವಿಸಮಾಜದ ಜನಜೀವನ ಹಾಗೂ ಹಾಯಿದೋಣಿ ಬಗ್ಗೆ ಪರಿಚಯ ಮಾಡಿಕೊಳ್ಳಲು ಹಾಯಿ ದೋಣಿ ಮಾರ್ಗದರ್ಶಿಯಾಗಲಿ ಎಂಬ ಉದ್ದೇಶದಿಂದ ಕ್ಷೇತ್ರದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಅನುಮತಿ ಮತ್ತು ಆಶೀರ್ವಾದಗಳೊಂದಿಗೆ ಇದನ್ನು ಮಂಜೂಷಾಕ್ಕೆ ಸಮರ್ಪಿಸಲಾಗಿದೆ ಎಂದು ಮಾಲಕ ವೆಂಕಟೇಶ್ ಖಾರ್ವಿ ತಿಳಿಸಿದ್ದಾರೆ.ಕೊಂಕಣಿ ಖಾರ್ವಿಸಮಾಜದ ಸುಭಾಷ್ ಖಾರ್ವಿ, ಸುನಿಲ್ ಖಾರ್ವಿ ಮತ್ತು ಸಮಾಜ ಬಾಂಧವರು ಉಪಸ್ಥಿತರಿದ್ದರು.






