ಬೆಳ್ತಂಗಡಿ: ಅಖಿಲ ಭಾರತೀಯ ಲೆಕ್ಕ ಪರಿಶೋಧನಾ ಸಂಸ್ಥೆ 2024ಇದರ ವತಿಯಿಂದ ಮೇ ತಿಂಗಳಿನಲ್ಲಿ ನಡೆದ ಸಿ.ಎ. ಅಂತಿಮ ಪರೀಕ್ಷೆಯಲ್ಲಿ ಬಹುಮುಖ ಪ್ರತಿಭೆ ಸುಕನ್ಯಾ ಕಾಮತ್ (ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಕೇಂದ್ರದ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್ ಮತ್ತು ರಾಧಿಕಾ ಕಾಮತ್ ಇವರ ಪ್ರಥಮ ಪುತ್ರಿ) ಉತ್ತಮ ಅಂಕದೊಂದಿಗೆ ಉತ್ತೀರ್ಣರಾಗಿರುತ್ತಾರೆ. ಇವರು ಚಾರ್ಟರ್ಡ್ ಎಕೌಂಟೆಂಟ್ ಕೆ. ದಾಮೋದರ ನಾಯಕ್ ಇವರ ದಾಮೋದರ ಆಂಡ್ ಕೊ ಇಲ್ಲಿ ಆಪ್ಟಿಕಲ್ ಶಿಪ್ ತರಬೇತಿ ಪಡೆದಿದ್ದು ಪ್ರಸ್ತುತ ಅಲ್ಲೇ ಉದ್ಯೋಗದಲ್ಲಿದ್ದಾರೆ. ಬಹುಮುಖ ಪ್ರತಿಭೆ ಹೊಂದಿರುವ ಸಿ.ಎ. ಸುಕನ್ಯಾ ಭರತನಾಟ್ಯ ವಿದ್ವತ್ ಅಂತಿಮ ವರ್ಷದ ವಿದ್ಯಾರ್ಥಿನಿಯಾಗಿದ್ದು ಸೀನಿಯರ್ ಶಾಸ್ತ್ರೀಯ ಸಂಗೀತ ಅಭ್ಯಾಸ ಮಾಡಿರುತ್ತಾರೆ. ಅನೇಕ ಪತ್ರಿಕೆಗಳಲ್ಲಿ ಕತೆ, ಕವನ ಬರೆಯುವ ಹವ್ಯಾಸ ಇರುವ ಇವರು ಅನೇಕ ಪ್ರಶಸ್ತಿಯನ್ನು ಪಡೆದಿರುತ್ತಾಳೆ.ಇವರು ವಾಣಿ ಆಂಗ್ಲ ಮಾಧ್ಯಮ ಶಾಲೆ ಹಳೆಕೋಟೆ, ಬೆಳ್ತಂಗಡಿ ಹಾಗೂ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿನಿಯಾಗಿರುತ್ತಾರೆ.






