ಬೆಳ್ತಂಗಡಿ: ಮಂಗಳೂರಿನಲ್ಲಿ ಜುಲೈ 28ರಂದು ನಡೆದ ಜೆಸಿಐ ಅಭಿವೃದ್ಧಿ, ಬೆಳವಣಿಗೆ ಹಾಗೂ ವ್ಯವಹಾರ ವಿಭಾಗದ ಸಮ್ಮೇಳನ ವೈಭವ-2024 ಕಾರ್ಯಕ್ರಮದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಪೂರ್ವಾಧ್ಯಕ್ಷ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ. ಕೋಟ್ಯಾನ್‌ರಿಗೆ ವೃತ್ತಿ ಮತ್ತು ಸಮಾಜಸೇವಾ ಕಾರ್ಯಸಾಧನೆಗಾಗಿ ಸಾಧನಾಶ್ರೀ- 2024 ಪ್ರಶಸ್ತಿ ನೀಡಿ ಗೌರವಿಸಲಾಯಿತು.2011ರಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಸಂಸ್ಥೆಗೆ ಸದಸ್ಯರಾಗಿ ಸೇರ್ಪಡೆಗೊಂಡು ಕೋಶಾಧಿಕಾರಿಯಾಗಿ,ಉಪಾಧ್ಯಕ್ಷರಾಗಿ, ಕಾರ್ಯದರ್ಶಿಯಾಗಿ, ಜೇಸಿ ಸಪ್ತಾಹದ ಕಾರ್ಯಕ್ರಮ ಸಂಯೋಜಕರಾಗಿ ವಿವಿಧ ಹುದ್ದೆಗಳನ್ನು ಅಲಂಕರಿಸಿ; 2017 ರಲ್ಲಿ ಘಟಕಾಧ್ಯಕ್ಷರಾಗಿ ಹಲವಾರು ಜನಪರ ಕಾರ್ಯಕ್ರಮಗಳನ್ನು ಮಾಡುವ ಮೂಲಕ ಸಮಾಜದಲ್ಲಿ ಗುರುತಿಸಿಕೊಂಡಿದ್ದರು.ಸಾಮಾಜಿಕ, ಧಾರ್ಮಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ತನ್ನನ್ನು ಸಕ್ರೀಯವಾಗಿ ತೊಡಗಿಸಿಕೊಂಡಿರುವುದಲಗಲದ್ದೇ; ಹಲವಾರು ಸಂಘ ಸಂಸ್ಥೆಗಳಲ್ಲಿ ಕ್ರಿಯಾಶೀಲವಾಗಿ ತೊಡಗಿಸಿಕೊಂಡಿದ್ದಾರೆ. ವೃತ್ತಿ ಕ್ಷೇತ್ರದಲ್ಲಿ ಸಲ್ಲಿಸುತ್ತಿರುವ ಅಪ್ರತಿಮ ಸೇವೆಯನ್ನು ಗುರುತಿಸಿ ಜೆಸಿಐ ವಲಯ 15ರ ವ್ಯವಹಾರ ಸಮ್ಮೇಳನ ‘ವೈಭವ’ ಸಾಧಕ ಜೇಸಿಗಳ ಸಮಾಗಮದಲ್ಲಿ ಸಾಧನಾಶ್ರೀ ಪುರಸ್ಕಾರ ನೀಡಿ ಗೌರವಿಸಲಾಗಿದೆ.






