ಬೆಳ್ತಂಗಡಿ: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯರವರ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಜೊತೆಗೂಡಿ ನಡೆಸುತ್ತಿರುವ ಷಡ್ಯಂತ್ರ ಮತ್ತು ಮುಖ್ಯಮಂತ್ರಿಗಳ ಮೇಲೆ ನೀಡಿರುವ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವರಾಜ್ಯಪಾಲರ ನಡೆ ಖಂಡಿಸಿ ಬೆಳ್ತಂಗಡಿ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ವತಿಯಿಂದ ಕಾರ್ಯಕರ್ತರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರ ನೇತೃತ್ವದಲ್ಲಿ ಮೆರವಣಿಗೆಯಲ್ಲಿ ಸಾಗಿ ಬಂದು ತಾಲೂಕು ಕಛೇರಿಯಲ್ಲಿ ತಹಶೀಲ್ದಾರರ ಮುಖಾಂತರ ರಾಷ್ಟ್ರಪತಿಗೆ ಮನವಿ ಕೊಡಲಾಯಿತು. ಬಿಜೆಪಿ ಕೈ ಗೊಂಬೆಯಾಗಿ ವರ್ತಿಸುತ್ತಿರುವ ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಗ್ರಾಮೀಣ ಬ್ಲಾಕ್ ಅಧ್ಯಕ್ಷ ನಾಗೇಶ್ ಗೌಡ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಕಾಶಿಪಟ್ಣ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಧರಣೇಂದ್ರ ಕುಮಾರ್, ಶೇಖರ್ ಕುಕ್ಕೆಡಿ, ಮಹಿಳಾ ಕಾಂಗ್ರೆಸಿನ ಸದಸ್ಯರು, ಯುವ ಕಾಂಗ್ರೆಸಿನ ಸದಸ್ಯರು, ಎನ್.ಎಸ್.ಯು.ಐ. ಮತ್ತು ಎಲ್ಲಾ ಮುಂಚೂಣಿ ಘಟಕದವರು ಭಾಗವಹಿಸಿದರು. ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು.






