ಹೆಡ್ ಕಾನ್‌ಸ್ಟೇಬಲ್ ವಿಜಯ ಕುಮಾರ್‌ರಿಗೆ ರಾಷ್ಟ್ರಪತಿಗಳ ಚಿನ್ನದ ಪದಕ ಗೌರವ

ಹೆಡ್ ಕಾನ್‌ಸ್ಟೇಬಲ್ ವಿಜಯ ಕುಮಾರ್‌ರಿಗೆ ರಾಷ್ಟ್ರಪತಿಗಳ ಚಿನ್ನದ ಪದಕ ಗೌರವ
Facebook
Twitter
LinkedIn
WhatsApp

ಬೆಳ್ತಂಗಡಿ: ಉಡುಪಿ ಜಿಲ್ಲಾ ಪೊಲೀಸ್ ಕಛೇರಿಯ ಡಿಸಿಆರ್‌ಬಿ ವಿಭಾಗದಲ್ಲಿ ಸಿವಿಲ್ ಹೆಡ್ ಕಾನ್‌ಸ್ಟೇಬಲ್ ಆಗಿ ಸೇವೆ ಸಲ್ಲಿಸುತ್ತಿರುವ ಬೆಳ್ತಂಗಡಿಯ ಬಿ. ವಿಜಯ ಕುಮಾರ್‌ರವರ ಪ್ರಾಮಾಣಿಕ ಅತ್ಯುನ್ನತ ಸೇವೆಯನ್ನು ಗುರುತಿಸಿ; ಅವರನ್ನು ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಚಿನ್ನದ ಪದಕಕ್ಕೆ ಆಯ್ಕೆ ಮಾಡಲಾಗಿದೆ. ಇವರ ಸಾಧನೆಗಾಗಿ ಇವರನ್ನು ಬೆಂಗಳೂರಿನಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಸಂಭ್ರಮದಲ್ಲಿ ರಾಜ್ಯದ ಉನ್ನತ ಪೊಲೀಸ್ ಅಧಿಕಾರಿಗಳು ಸ್ಮರಣಿಕೆ ನೀಡಿ ಗೌರವಿಸಿದರು. ಬಿ. ವಿಜಯ ಕುಮಾರ್ 1993ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡು ಕಳೆದ 31ವರ್ಷಗಳಿಂದ ಪಣಂಬೂರು, ಉರ್ವ, ಪುತ್ತೂರು ನಗರ, ಹಿರಿಯಡ್ಕ, ಉಡುಪಿ, ಕುಂದಾಪುರ ಉಡುಪಿ ಟ್ರಾಫಿಕ್ ಪೊಲೀಸ್ ಠಾಣೆಗಳಲ್ಲಿ ಸೇವೆ ಸಲ್ಲಿಸಿ; ತನ್ನ ಪ್ರಾಮಾಣಿಕ ಸೇವೆಯ ಮೂಲಕ ಜನಮನ್ನಣೆ ಗಳಿಸಿದ್ದಾರೆ. ಇವರ ಸೇವೆಯನ್ನು ಗುರುತಿಸಿದ ಪೊಲೀಸ್ ಇಲಾಖೆ ಇವರನ್ನು 2022ರಲ್ಲಿ ಮುಖ್ಯಮಂತ್ರಿಗಳ ಚಿನ್ನದ ಪದಕ ನೀಡಿ ಗೌರವಿಸಿತ್ತು. ಮೂಲತಃ ಬೆಳ್ತಂಗಡಿಯವರಾದ ಇವರು ದಿವಂಗತ ಗೋಪಾಲಕೃಷ್ಣ ಮತ್ತು ಶಾರದಾ ದಂಪತಿಗಳ ಸುಪುತ್ರ.p0

Latest News

Related Posts