ಬೆಳ್ತಂಗಡಿ: ಮುಲ್ಕಿ ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ಫಯರ್, ಭಾರತ ಸರಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಮಂಗಳೂರು, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ರೋಟರಿ ಕ್ಲಬ್ ಬೈಕಂಪಾಡಿ, ಗ್ರಾಮ ಪಂಚಾಯತ್ ಪಡುಪಣಂಬೂರು ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ ಅಂಗವಾಗಿ ತೋಕೂರು ಸುಬ್ರಹ್ಮಣ್ಯ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಹಣ್ಣು ಹಂಪಲು ವಿತರಣೆಯನ್ನು ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ಫಯರ್ ವತಿಯಿಂದ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಬಪ್ಪನಾಡು ಲಯನ್ಸ್ ಕ್ಲಬ್ ಅಧ್ಯಕ್ಷ ಬಿ. ಶಿವಪ್ರಸಾದ್, ಕಾರ್ಯದರ್ಶಿ ಪ್ರತಿಭಾ ಹೆಬ್ಬಾರ್, ಖಜಾಂಚಿ ಅನಿಲ್ ಕುಮಾರ್, ಲಯನ್ ಪ್ರಾಂತ್ಯ11ರ ಪ್ರಾಂತ್ಯಾಧ್ಯಕ್ಷ ವೆಂಕಟೇಶ್ ಹೆಬ್ಬಾರ್, ಪಡುಪಣಂಬೂರು ಲಯನ್ಸ್ ಕ್ಲಬ್ ಕಾರ್ಯದರ್ಶಿ ಸುಜಾತ, ಫೇಮಸ್ ಯೂತ್ ಕ್ಲಬ್ ಕಾರ್ಯದರ್ಶಿ ಹಿಮಕರ ಕೋಟ್ಯಾನ್, ಅಂಗನವಾಡಿ ಕಾರ್ಯಕರ್ತೆಯರಾದ ಪ್ರೇಮಲತಾ, ಸಹಾಯಕಿ ವಿಶಾಂತಿ ಹಾಗೂ ಮಕ್ಕಳ ಪೋಷಕರು ಉಪಸ್ಥಿತರಿದ್ದರು.






