ಕಕ್ಕಿಂಜೆಯಲ್ಲಿ ಉಚಿತ ವೈದ್ಯಕೀಯ ಚಿಕಿತ್ಸಾ ಶಿಬಿರ

ಕಕ್ಕಿಂಜೆಯಲ್ಲಿ  ಉಚಿತ ವೈದ್ಯಕೀಯ ಚಿಕಿತ್ಸಾ ಶಿಬಿರ
Facebook
Twitter
LinkedIn
WhatsApp

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಕೇಂದ್ರ ಕಛೇರಿಯನ್ನು ಹೊಂದಿರುವ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಕಕ್ಕಿಂಜೆ ಶಾಖೆಯ ದಶಮಾನೋತ್ಸವದ ಪ್ರಯುಕ್ತ ಕೆ.ಎಮ್.ಸಿ ಆಸ್ಪತ್ರೆ ಅತ್ತಾವರ ಮಂಗಳೂರು ಮತ್ತು ಮಣಿಪಾಲ್ ಕಾಲೇಜ್ ಆಫ್ ಡೆಂಟಲ್ ಸೈನ್ಸಸ್ ಇದರ ಸಹಭಾಗಿತ್ವದಲ್ಲಿ ಶ್ರೀ ನಾರಾಯಣ ಧರ್ಮಪರಿಪಾಲನಾ ಯೋಗಂ ತೋಟತ್ತಾಡಿ, ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಚಾರ್ಮಾಡಿ, ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ತೋಟತ್ತಾಡಿ ಹಾಗೂ ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನ ಚಾರ್ಮಾಡಿ ಇವರ ಸಂಯುಕ್ತ ಆಶ್ರಯದಲ್ಲಿ ದಿನಾಂಕ ಸೆಪ್ಟೆಂಬರ್ 9ರಂದು ಚಾರ್ಮಾಡಿ ಗ್ರಾಮ ಪಂಚಾಯತ್ ಸಭಾಭವನ ಕಕ್ಕಿಂಜೆಯಲ್ಲಿ ಉಚಿತ ಬೃಹತ್ ವೈದ್ಯಕೀಯ ಚಿಕಿತ್ಸಾ ಶಿಬಿರ ಯಶಸ್ವಿಯಾಗಿ ಸಂಪನ್ನಗೊಂಡಿತು. ಶಿಬಿರದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷ ಭಗೀರಥ ಜಿ. ಮಾತನಾಡಿ ಆರೋಗ್ಯದ ಕಾಳಜಿಯ ಬಗ್ಗೆ ಹೆಚ್ಚಿನ ಗಮನ ಹರಿಸುವಂತೆ ಹೇಳಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಚಾರ್ಮಾಡಿ ಗ್ರಾಮ ಪಂಚಾಯತ್‌ ಅಧ್ಯಕ್ಷೆ ಶಾರದ ಐ. ಮಾತಾನಾಡಿ; ಗುರುದೇವ ಸೊಸೈಟಿಯ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ವಿಶೇಷಾಧಿಕಾರಿ ಮೋನಪ್ಪ ಕಂಡೆತ್ಯಾರು; ಸಂಘದ ಕಾರ್ಯಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು. ಸುಮಾರು 250ಕ್ಕೂ ಅಧಿಕ ಶಿಬಿರಾರ್ಥಿಗಳು ಈ ಶಿಬಿರದ ಸದುಪಯೋಗವನ್ನು ಪಡೆದುಕೊಂಡರು. ಈ ಸಂದರ್ಭದಲ್ಲಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಚಾರ್ಮಾಡಿಯ ಅಧ್ಯಕ್ಷ ಯಶೋಧರ ಚಾರ್ಮಾಡಿ, ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ತೋಟತ್ತಾಡಿಯ ಅಧ್ಯಕ್ಷ ಸನತ್ ಕುಮಾರ್ ಹಾಗೂ ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನ ಚಾರ್ಮಾಡಿಯ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಪ್ರಕಾಶ್ ಹೊಸ್ಮಠ, ಚಾರ್ಮಾಡಿ ಗ್ರಾಮ ಪಂಚಾಯತ್ ಅಭಿವೃಧ್ಧಿ ಅಧಿಕಾರಿಯಾದ ಪುರುಷೋತ್ತಮ ಜಿ. ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅಶ್ವತ್ಥ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಚಾರ್ಮಾಡಿಯ ಕಾರ್ಯದರ್ಶಿ ಸುರೇಶ್ ಸ್ವಾಗತಿಸಿದರು. ಸಂಘದ ಕಕ್ಕಿಂಜೆ ಶಾಖೆ ಶಾಖಾ ವ್ಯವಸ್ಥಾಪಕ ಜಾರಪ್ಪ ಪೂಜಾರಿ ವಂದಿಸಿದರು. ಸಂಘದ ಕೇಂದ್ರ ಕಚೇರಿಯ ಹಿರಿಯ ವ್ಯವಸ್ಥಾಪಕ ಕೀರ್ತನ್ ಕುಮಾರ್, ಹಿರಿಯ ವ್ಯವಸ್ಥಾಪಕ ರೂಪಲತಾ, ಆಂತರಿಕ ಲೆಕ್ಕ ಪರಿಶೋಧಕ ಶರತ್ ಕುಮಾರ್, ಇತರ ಶಾಖೆಗಳ ಶಾಖಾ ವ್ಯವಸ್ಥಾಪಕರು ಹಾಗೂ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

Latest News

Related Posts