ವಿಶಿಷ್ಟ ರೀತಿಯಲ್ಲಿ ಮಹಾತ್ಮಾ ಗಾಂಧೀಜಿ ಜಯಂತಿ ಆಚರಣೆ

ವಿಶಿಷ್ಟ ರೀತಿಯಲ್ಲಿ ಮಹಾತ್ಮಾ ಗಾಂಧೀಜಿ ಜಯಂತಿ ಆಚರಣೆ
Facebook
Twitter
LinkedIn
WhatsApp

ಬೆಳ್ತಂಗಡಿ: ಭಾರತೀಯ ರೆಡ್‌ಕ್ರಾಸ್ ಸೊಸೈಟಿ ಬೆಳ್ತಂಗಡಿ, ನ್ಯಾಷನಲ್ ಇನ್ಶುರೆನ್ಸ್ ಕಂಪನಿ ಬಂಟ್ವಾಳ ಬ್ರಾಂಚ್ ಮತ್ತು ಜೆಸಿಐ ಸೀನಿಯರ್ ಛೇಂಬರ್‌ಗಳ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಜಯಂತಿ ಆಚರಣೆಯನ್ನು ಅತ್ಯಂತ ವಿಶಿಷ್ಟವಾಗಿ ಆಚರಿಸಲಾಯಿತು.
ಬೆಳ್ತಂಗಡಿ ತಾಲೂಕು ಸಮುದಾಯ ಆರೋಗ್ಯ ಕೇಂದ್ರದ ಒಳರೋಗಿಗಳಿಗೆ ಹಣ್ಣುಹಂಪಲು ವಿತರಣೆ ಮಾಡಿದ್ದಲ್ಲದೇ ಆಸ್ಪತ್ರೆಯ ಆವರಣದಲ್ಲಿ ಸ್ವಚ್ಚತಾ ಕಾರ್ಯ ನಡೆಸುವ ಮೂಲಕ ಅತ್ಯಂತ ವಿಶಿಷ್ಟವಾಗಿ ಮಹಾತ್ಮಾ ಗಾಂಧೀಜಿ ಜಯಂತಿ ಆಚರಿಸುವ ಮೂಲಕ ಸಾರ್ವಜನಿಕರ ಶ್ಲಾಘನೆಗೆ ಪಾತ್ರವಾಯಿತು.
ಈ ಸಂದರ್ಭದಲ್ಲಿ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಮ್, ನ್ಯಾಷನಲ್ ಇನ್ಶುರೆನ್ಸ್ ಹಿರಿಯ ಅಭಿವೃದ್ಧಿ ಅಧಿಕಾರಿ ಜ್ಹಾನ್ ಅರ್ವಿನ್ ಡಿಸೋಜ, ಭಾರತೀಯ ರೆಡ್‌ಕ್ರಾಸ್ ಸೊಸೈಟಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಹರಿದಾಸ್ ಎಸ್.ಎಂ., ಸೀನಿಯರ್ ಜೇಸಿಯ ಸದಸ್ಯ ಪ್ರಮೋದ್ ಆರ್. ನಾಯಕ್, ಭಾರತೀಯ ರೆಡ್‌ಕ್ರಾಸ್ ಸೊಸೈಟಿ ಪ್ರಧಾನ ಕಾರ್ಯದರ್ಶಿ ಯಶವಂತ ಪಟವರ್ಧನ್, ಹಿರಿಯ ನ್ಯಾಯವಾದಿ ನಿರ್ದೇಶಕರಾದ ಶಿವಕುಮಾರ್ ಎಸ್.ಎಂ., ನ್ಯಾಯವಾದಿ ಸುಕನ್ಯಾ ಹೆಚ್., ಉಪನ್ಯಾಸಕ ಸುಜೀತ್ ಉಜಿರೆ ಉಪಸ್ಥಿತರಿದ್ದರು.

Latest 5

Related Posts