ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರ

ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರ
Facebook
Twitter
LinkedIn
WhatsApp

ಬೆಳ್ತಂಗಡಿ: ವಿದ್ಯಾರ್ಥಿ ಜೀವನದಲ್ಲಿ ಸೇವಾ ಮನೋಭಾವ, ಶಿಸ್ತು, ಸಮಯ ಪಾಲನೆ ಹಾಗೂ ಕೂಡಿ ಬಾಳುವ ಮನೋಭಾವ ಬೆಳೆಸಿಕೊಳ್ಳಲು ರಾಷ್ಟ್ರೀಯ ಸೇವಾ ಯೋಜನೆಯ ಇಂತಹ ಶಿಭಿರಗಳು ಸಹಾಯಕಾರಿಯಾಗಿವೆ ಎಂದು ಮುಂಡಾಜೆಯ ಶತಾಬ್ದಿ ವಿದ್ಯಾಲಯ ಸಮಿತಿ ಸಂಚಾಲಕ ನಾರಾಯಣ ಫಡ್ಕೆ ಹೇಳಿದರು. ಅವರು ಅಕ್ಟೋಬರ್ 3ರಂದು ಬೆಳ್ತಂಗಡಿ ತಾಲೂಕಿನ ಚಿಬಿದ್ರೆ ಗ್ರಾಮದ ಪೆರಿಯಡ್ಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯುತ್ತಿರುವ ಮುಂಡಾಜೆ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಭಿರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದದರು.ಕಾಲೇಜಿನ ಪ್ರಾಂಶುಪಾಲೆ ಜಾಲಿ ಒ.ಎ. ಅಧ್ಯಕ್ಷತೆ ವಹಿಸಿದ್ದರು.ತೋಟತ್ತಾಡಿ ಸೈಂಟ್ ಆ್ಯಂಟನಿ ಚರ್ಚ್‌ನ ಧರ್ಮಗುರು ವಂದನೀಯ ಜೋಸ್ ಪೂವತ್ತಿಂಗಳ್ ಆಶೀರ್ವಚನ ನೀಡಿದರು. ಚಾರ್ಮಾಡಿಯ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಪ್ರಕಾಶ್ ಹೊಸ್ಮಠ, ಪೆರಿಯಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಮೇರಿ ವಿ.ವಿ., ಕುಡುಮಡ್ಕ ಶ್ರೀ ಅನ್ನಪೂರ್ಣೇಶ್ವರಿ ಕ್ಷೇತ್ರದ ಆಡಳಿತ ಮೊಕ್ತೇಸರ ರಾಘವ ಗೌಡ ಕುಡುಮಡ್ಕ, ಶಿಭಿರ ನಿರ್ವಹಣಾ ಸಮಿತಿ ಅಧ್ಯಕ್ಷ ಸೋಮನಾಥ ಗೌಡ ಉಪಸ್ಥಿತರಿದ್ದರು.ರಾಷ್ಟ್ರೀಯ ಸೇವಾ ಯೋಜನೆಯ ಶಿಭಿರಾಧಿಕಾರಿ ನಮಿತಾ ಕೆ.ಆರ್. ಸ್ವಾಗತಿಸಿದರು. ಸಂಖ್ಯಾಶಾಸ್ತ್ರ ಉಪನ್ಯಾಸಕಿ ವಿದ್ಯಾ ರಾವ್ ವಂದಿಸಿದರು. ಕನ್ನಡ ಉಪನ್ಯಾಸಕಿ ವಸಂತಿ ಕಾರ್ಯಕ್ರಮ ನಿರೂಪಿಸಿದರು.

Latest News

Related Posts