ಬೆಳ್ತಂಗಡಿ: ತುಳುವರನ್ನು ಜಾತಿ, ಮತ, ಧರ್ಮ ಭೇದವಿಲ್ಲದೇ ಬೆಸೆಯುವ ಶಬ್ಧವೇ ಡೆನ್ನನ ಡೆನ್ನಾನ. ಡೆನ್ನನ ಡೆನ್ನಾನ ಶಬ್ಧವೇ ತುಳುವರಿಗೆ ರೋಮಾಂಚಕ. ಎಲ್ಲ ಸಮುದಾಯಗಳಿಗೂ ಒಂದು ಸಾಂಸ್ಕೃತಿಕ ಹಿನ್ನೆಲೆ ಇದೆ. ಆದರೆ ಇಂದು ಸರಿಯಾದ ಆಚರಣೆ ಇಲ್ಲದೇ ನಿರ್ಲಕ್ಷ್ಯದಿಂದ ನಮ್ಮ ಸಾಂಸ್ಕೃತಿಕ ಹಿನ್ನೆಲೆಯನ್ನು ಕಳೆದುಕೊಳ್ಳುವ ಆತಂಕದಲ್ಲಿದ್ದೇವೆ. ಯುವವಾಹಿನಿ ಸಂಘಟನೆ ನಮ್ಮ ಸಾಂಸ್ಕೃತಿಕ ಪರಂಪರೆಯನ್ನು ಸಂಸ್ಕರಿಸುವ ಒಳ್ಳೆಯ ಉದ್ಧೇಶದಿಂದ ಇಂತಹ ಕಾರ್ಯಕ್ರಮ ಹಮ್ಮಿಕೊಂಡಿದೆ. ಖಂಡಿತಾ ಯುವವಾಹಿನಿಯ ಎಲ್ಲ ಸದಸ್ಯರೂ ಅಭಿನಂದನಾರ್ಹರು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಹಾಗೂ ಬೆಸ್ಟ್ ಫೌಂಡೇಶನ್‌ನ ಅಧ್ಯಕ್ಷ ರಕ್ಷಿತ್ ಶಿವರಾಂ ಹೇಳಿದರು.ಅವರು ಡಿಸೆಂಬರ್ 1ರಂದು ಬೆಳ್ತಂಗಡಿಯ ಸಮಾಜ ಮಂದಿರದಲ್ಲಿ ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ಯುವವಾಹಿನಿ ಬೆಳ್ತಂಗಡಿ ಘಟಕದ ಆತಿಥ್ಯದಲ್ಲಿ ಬೆಳ್ತಂಗಡಿಯ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಸಹಯೋಗದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನನ ಡೆನ್ನಾನ’ ಗೆ ಡೋಲು ಬಾರಿಸಿ ಚಾಲನೆ ನೀಡಿ ಮಾತನಾಡುತ್ತಿದ್ದರು.ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸಿ ಉದ್ಘಾಟಿಸಿದ ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ್ ಮಾತನಾಡಿ; ಸಂಘಟನೆಯಿಂದ ಸಮಾಜ ಬಲಿಷ್ಠವಾಗುತ್ತದೆ. ವಿದ್ಯೆ, ಉದ್ಯೋಗ ಹಾಗೂ ಸಂಪರ್ಕದ ಸದುದ್ಧೇಶದಿಂದ ಸಂಘಟಿತವಾದ ಯುವವಾಹಿನಿ ಇಂದು ಸಮಾಜದ ಯುವಕರನ್ನು ಉತ್ತಮವಾಗಿ ಸಂಘಟಿಸುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಮಂಗಳೂರು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಬೈಲಬರಿ ಹರೀಶ್ ಕೆ. ಪೂಜಾರಿಯವರ ಅಧ್ಯಕ್ಷತೆಯಲ್ಲಿ ನಡೆದ ಈ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ಮಂಗಳೂರು ಫಾದರ್ ಮುಲ್ಲರ್ಸ್ ಆಸ್ಪತ್ರೆಯ ಅಸೋಸಿಯೇಟ್ ಪ್ರೊಫೆಸರ್ ಡಾ| ಹರ್ಷವರ್ಧನ್, ಮಂಗಳೂರು ಮಹಾನಗರಪಾಲಿಜೆಯ ಪ್ರತಿಪಕ್ಷ ನಾಯಕ ಅನಿಲ್ ಕುಮಾರ್, ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಉಪಾಧ್ಯಕ್ಷ ಸುಂದರ ಪೂಜಾರಿ, ಮಹಿಳಾ ಬಿಲ್ಲವ ವೇದಿಕೆಯ ಅಧ್ಯಕ್ಷೆ ಸುಮತಿ ಪ್ರಮೋದ್, ಸಂಘಟನೆಯ ಪ್ರಮುಖರಾದ ಪ್ರಶಾಂತ್ ಮಚ್ಚಿನ, ಹರೀಶ್ ಕಳಿಯ, ಸದಾಶಿವ ಪೂಜಾರಿ ಊರ, ಯಶೋಧರ ಮುಂಡಾಜೆ, ಜಗದೀಶ್‌ಚಂದ್ರ ಡಿ.ಕೆ. ಉಪಸ್ಥಿತರಿದ್ದರು.ಸ್ಮಿತೇಶ್ ಬಾರ್ಯ ಮಾರ್ಗದರ್ಶನದಲ್ಲಿ ಪ್ರಜ್ಞಾ ಓಡಿಲ್ನಾಳ ನಿಯಮಬದ್ಧವಾಗಿ ನಿರೂಪಿಸಿದ ಕಾರ್ಯಕ್ರಮದಲ್ಲಿ ಡೆನ್ನನ ಡೆನ್ನಾನ ಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರಮದ ಪ್ರಧಾನ ಸಂಚಾಲಕ ಪ್ರಶಾಂತ್ ಮಚ್ಚಿನ ಸ್ವಾಗತಿಸಿದರು. ಯುವವಾಹಿನಿ ಬೆಳ್ತಂಗಡಿ ಘಟಕದ ಮಾಜಿ ಅಧ್ಯಕ್ಷ ಹಾಗೂ ಬೆಳ್ತಂಗಡಿ ಗುರುದೇವ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶ್ವಥ್ ವಂದಿಸಿದರು.






