ಧರ್ಮಸ್ಥಳದಲ್ಲಿ ಯಾಂತ್ರೀಕೃತ ಕೃಷಿಗೆ ಚಾಲನೆ

ಧರ್ಮಸ್ಥಳದಲ್ಲಿ ಯಾಂತ್ರೀಕೃತ ಕೃಷಿಗೆ ಚಾಲನೆ
Facebook
Twitter
LinkedIn
WhatsApp

ಬೆಳ್ತಂಗಡಿ: ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿ ಮತ್ತು ಮಾರ್ಗದರ್ಶನದಲ್ಲಿ ಜೂನ್ 16ರಂದು ಧರ್ಮಸ್ಥಳದ ಗದ್ದೆಯಲ್ಲಿ ಯಾಂತ್ರೀಕೃತ ಕೃಷಿಗೆ ಚಾಲನೆ ನೀಡಲಾಯಿತು.ಯಾಂತ್ರೀಕೃತ ಕೃಷಿಯಿಂದ ರೈತರು ಕಡಿಮೆ ವೆಚ್ಚದಲ್ಲಿ ಅಧಿಕ ಇಳುವರಿ ಮತ್ತು ಲಾಭ ಪಡೆಯುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ ಎಂದು ಹೇಳಿ ಡಾ. ಹೆಗ್ಗಡೆಯವರು ಶುಭ ಹಾರೈಸಿದರು.ಯಂತ್ರಶ್ರೀ ಯೋಜನೆಯಲ್ಲಿ ರಾಜ್ಯದ 96 ತಾಲೂಕುಗಳಲ್ಲಿ 44,119 ರೈತರನ್ನು ಪ್ರೇರೆಪಿಸಿ, 1,00,254 ಎಕ್ರೆ ಕೃಷಿ ಭೂಮಿಯನ್ನು ಈಗಾಗಲೆ ಹದಗೊಳಿಸಲಾಗಿದೆ ಎಂದು ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿವಾಹಕ ನಿರ್ದೇಶಕ ಅನಿಲ್ ಕುಮಾರ್ ಎಸ್‌.ಎಸ್‌. ತಿಳಿಸಿದ್ದಾರೆ.

Latest 5

Related Posts