ತಾತ್ಕಾಲಿಕ ಭೋಜನಾ ಶಾಲೆ ನಿರ್ಮಾಣಕ್ಕೆ ಶಿಲಾನ್ಯಾಸ

ತಾತ್ಕಾಲಿಕ ಭೋಜನಾ ಶಾಲೆ ನಿರ್ಮಾಣಕ್ಕೆ ಶಿಲಾನ್ಯಾಸ
Facebook
Twitter
LinkedIn
WhatsApp

ಬೆಳ್ತಂಗಡಿ: ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತಾತ್ಕಾಲಿಕ ಭೋಜನಾ ಶಾಲೆ ನಿರ್ಮಾಣಕ್ಕೆ ಭೂಮಿಪೂಜೆಯನ್ನು ಮಾರ್ಚ್‌ 19ರ ಚಾಂದ್ರಮಾನ ಯುಗಾದಿಯಂದು ನೆರವೇರಿಸಲಾಯಿತು.ಅಳದಂಗಡಿ ಅರಮನೆಯ ಡಾ| ಪದ್ಮಪ್ರಸಾದ ಅಜಿಲರ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮ ನೆರವೇರಿತು. ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ, ಜೀರ್ಣೋದ್ಧಾರ ಸಮಿತಿಯ ಆನಂದ ಶೆಟ್ಟಿ ಅಡ್ಯಾರ್, ಎಕ್ಸೆಲ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಬ್ರೈಟ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶರತ್ ಗೋರೆ, ನಿವೃತ್ತ ಉಪನ್ಯಾಸಕ ಕೆ. ಶಿವರಾಮ ಹೆಗ್ಡೆ, ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎ. ಜಯರಾಮ್ ಶೆಟ್ಟಿ ಪ್ರಧಾನ ಅರ್ಚಕ ವಿಷ್ಣುಮೂರ್ತಿ ಭಟ್ ಸೇರಿದಂತೆ ವ್ಯವಸ್ಥಾಪನ ಸಮಿತಿ ಸದಸ್ಯರು ಹಾಗೂ ಹಲವು ಪ್ರಮುಖರು ಉಪಸ್ಥಿತರಿದ್ದರು.ವ್ಯವಸ್ಥಾಪನ ಸಮಿತಿಯ ನಿತೀಶ್ ಎಚ್. ಕೋಟ್ಯಾನ್ ಸ್ವಾಗತಿಸಿ, ರಾಕೇಶ್ ಕುಮಾರ್ ಮೂಡುಕೋಡಿ ಕಸರ್ಯಕ್ರಮ ನಿರೂಪಿಸಿದರು. ಸತೀಶ್ ಹೆಗ್ಡೆ ವಂದಿಸಿದರು.

Latest News

Related Posts