ಬೆಳ್ತಂಗಡಿ: ಬ್ರೇಕ್ ಫೈಲ್ ಆಗಿ ಚಾಲಕನ ನಿಯಂತ್ರಣ ತಪ್ಪಿದ ಟಿಟಿ ವಾಹನ ಪಲ್ಟಿಯಾಗಿ ಒಂಬತ್ತು ಮಂದಿ ಗಂಭೀರ ಗಾಯಗೊಂಡು, ಓರ್ವ ವೃದ್ಧ ಸಾವನ್ನಪ್ಪಿದ್ದ ಘಟನೆ ವರದಿಯಾಗಿದೆ.ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ನ ಒಂಬತ್ತನೇ ತಿರುವಿನಲ್ಲಿ ಮಾರ್ಚ್ 21ರಂದು ಬ್ರೇಕ್ ಫೈಲ್ ಆಗಿ ಟಿಟಿ ವಾಹನ ಪಲ್ಟಿಯಾಗಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಮೇಲನಹಳ್ಳಿಯಿಂದ 10 ಮಂದಿ ಸೇರಿದಂತೆ ಮೂವರು ಮಕ್ಕಳು ಟಿಟಿ ವಾಹನದಲ್ಲಿ ಪ್ರಯಾಣಿಸುತ್ತಿದ್ದರು.ಟಿಟಿ ವಾಹನಲ್ಲಿ ಒಂದೇ ಕುಟುಂಬದ 13 ಮಂದಿಯಲ್ಲಿ 9 ಮಂದಿಗೆ ಗಂಭೀರ ಗಾಯವಾಗಿದ್ದು. ಮಲೇನಹಳ್ಳಿ ನಿವಾಸಿ ಶೇಖರಪ್ಪ (59) ಸಾವನ್ನಪ್ಪಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಕಿಶೋರ್ ಪಿ. ಮತ್ತು ತಂಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.







