ಶ್ರೀ ಧ.ಮಂ. ಬಿ.ಎಡ್. ಹಾಗೂ ಡಿ.ಎಡ್. ಕಾಲೇಜಿನಲ್ಲಿಅಂಬೇಡ್ಕರ್ ಜಯಂತಿ ಆಚರಣೆ

ಶ್ರೀ ಧ.ಮಂ. ಬಿ.ಎಡ್. ಹಾಗೂ ಡಿ.ಎಡ್. ಕಾಲೇಜಿನಲ್ಲಿಅಂಬೇಡ್ಕರ್ ಜಯಂತಿ ಆಚರಣೆ
Facebook
Twitter
LinkedIn
WhatsApp

ಬೆಳ್ತಂಗಡಿ: ಶ್ರೀ ಧರ್ಮಸ್ಠಳ ಮಂಜುನಾಥೇಶ್ವರ ಬಿ.ಎಡ್. ಹಾಗೂ ಡಿ.ಎಡ್. ಸಂಸ್ಥೆಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು.ಉಜಿರೆಯ ಎಸ್.ಡಿ.ಎಂ. ಕಾಲೇಜಿನ ಬಿ.ವೋಕ್ ಇನ್ ರೀಟೇಲ್ ಮತ್ತು ಮ್ಯಾನೇಜ್‌ಮೆಂಟ್ ವಿಭಾಗದ ಮುಖ್ಯಸ್ಥರು ಹಾಗೂ ಸಹಾಯಕ ಪ್ರಾಧ್ಯಾಪಕರಾದ ಆಶ್ವಿತ್ ಎಚ್.ಆರ್. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದರು.ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಅವರು ‘ಭಾರತದ ಸಂವಿಧಾನದ ಶಿಲ್ಪಿ ಕಾನೂನುತಜ್ಞ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಜಗತ್ತು ಕಂಡ ಅದ್ಭುತ ವ್ಯಕ್ತಿ. ತಮ್ಮ ಹೋರಾಟದ ಜೊತೆಗೆ ಕಷ್ಟದ ಸಂದರ್ಭದಲ್ಲೂ ಬದುಕು ಕಟ್ಟಿಕೊಂಡವರು. ಭಾರತದಲ್ಲಿ ಜನಿಸಿದ ಪ್ರತಿಯೊಂದು ಮಗುವು ಕೂಡ ಶಿಕ್ಷಣ ಪಡೆದು ಸಂಘಟನೆಯ ಮೂಲಕ ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂಬುದು ಅವರ ಆಶಯವಾಗಿತ್ತು. ಪ್ರತಿಯೊಬ್ಬ ಪ್ರಜೆಯು ಹೆಚ್ಚು ಹೆಚ್ಚು ಪುಸ್ತಕವನ್ನು ಓದಿದಷ್ಟು ಅವರಲ್ಲಿ ಚಿಂತನೆ ಬೆಳೆಯುತ್ತದೆ. ಹಾಗಾಗಿ ಭವಿಷ್ಯದ ಶಿಕ್ಷಕರಾದ ತಾವುಗಳು ಪುಸ್ತಕ ಓದುವುದನ್ನು ರೂಢಿಸಿಕೊಳ್ಳಿ ಎಂದರು.ಅಧ್ಯಕ್ಷತೆ ವಹಿಸಿದ್ದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಡಿ.ಎಡ್./ಬಿ.ಎಡ್. ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಮಂಜು ಆರ್. ಮಾತನಾಡಿ; ಡಾ. ಬಿ.ಆರ್. ಅಂಬೇಡ್ಕರ್ ಅವರು ಲೋಕಜ್ಞಾನಿ, ಅಪಾರ ಪಾಂಡಿತ್ಯವುಳ್ಳ ಶಿಕ್ಷಣತಜ್ಞ – ಆರ್ಥಿಕತಜ್ಞ ಹಾಗೂ ನ್ಯಾಯಶಾಸ್ತ್ರಜ್ಞ. ಸಮಾಜದಲ್ಲಿ ಪ್ರತಿಯೊಬ್ಬ ವ್ಯಕ್ತಿಯು ಸಮಾನತೆಯಿಂದ ಸ್ವಾತಂತ್ರವಾಗಿ ಬದುಕಬೇಕಾದರೆ ಆತನಿಗೆ ಶಿಕ್ಷಣ ಮುಖ್ಯ. ಅಲ್ಲದೇ ಸಮಾಜದಲ್ಲಿ ಅಸಮಾನತೆ, ಶೋಷಣೆಯ ವಿರುದ್ಧ ದನಿ ಎತ್ತಿದ ಮಹಾನ್‌ಪುರುಷ ಡಾ. ಬಿ.ಆರ್. ಅಂಬೇಡ್ಕರ್‌ರವರು. ಇವರ ಆದರ್ಶಗಳನ್ನು ನಾವೆಲ್ಲರೂ ರೂಢಿಸಿಕೊಳ್ಳೋಣ ಎಂದು ಹೇಳಿದರು.ವೇದಿಕೆಯಲ್ಲಿ ಬಿ.ಎಡ್. ಹಾಗೂ ಡಿ.ಎಡ್. ಕಾಲೇಜಿನ ವಿದ್ಯಾರ್ಥಿ ನಾಯಕಿಯರಾದ ಶ್ರವಣ ಮಹಾಪುರುಷ ಮತ್ತು ರಂಝಿಯಾ ಬಾನು ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ಕಾಲೇಜಿನ ಎಲ್ಲಾ ಸಹ ಪ್ರಾಧ್ಯಾಪಕರು, ಸಿಬ್ಬಂದಿ ವರ್ಗದವರು ಮತ್ತು ಬಿ.ಎಡ್. ಮತ್ತು ಡಿ.ಎಡ್. ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.ಪ್ರಥಮ ಬಿ.ಇಡಿ. ಪ್ರಶಿಕ್ಷಣಾರ್ಥಿಗಳಾದ ದೀಪ್ತಿ ಸ್ವಾಗತಿಸಿ, ಕವಿತಾ ಬಿ. ಅತಿಥಿ ಪರಿಚಯಿಸಿ, ಸುಷ್ಮಾ ವಂದಿಸಿ, ವರ್ಷಿತಾ ಕಾರ್ಯಕ್ರಮವನ್ನು ನಿರೂಪಿಸಿದರು.

Latest News

Related Posts