ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಮೇಲೆ ಇಬ್ಬರು ಯುವಕರು ಅತ್ಯಾಚಾರ ಮಾಡಿದ ಅತ್ಯಂತ ಹೇಯಕೃತ್ಯವನ್ನು ಭೇದಿಸಿದ ಧರ್ಮಸ್ಥಳ ಪೊಲೀಸರು ಇಬ್ಬರು ಅತ್ಯಾಚಾರಿಗಳನ್ನು ಬಂಧಿಸಿದ್ದಾರೆ.ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ 15 ವರ್ಷದ ಅಪ್ರಾಪ್ತ ಬಾಲಕಿಯನ್ನು ಇಬ್ಬರು ಯುವಕರು ಪುಸಲಾಯಿಸಿ ಆಮಿಷ ಒಡ್ಡಿ ಎರ್ಮಾಯಿ ಫಾಲ್ಸ್ ಬಳಿಯ ಕಾಡಿಗೆ ಎಪ್ರಿಲ್ 16ರಂದು ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿರುವ ವಿಚಾರವನ್ನು ಭಯದಿಂದಲೇ ಬಾಲಕಿ ಹೆತ್ತವರಿಗೆ ತಿಳಿಸಿದ್ದು; ವಿಚಾರ ತಿಳಿದ ಪೋಷಕರು ತಡಮಾಡದೇ ಧರ್ಮಸ್ಥಳ ಪೊಲೀಸ್ ಠಾಣೆಗೆ ಎಪ್ರಿಲ್ 17ರಂದು ದೂರು ನೀಡಿದ್ದು; ದೂರು ಸ್ವೀಕರಿಸಿದ ಪೊಲೀಸರು ಪೋಕ್ಸೋ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿಣಿ ಸಿ.ಕೆ. ಮಾರ್ಗದರ್ಶನದಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ ಬಿ.ಎಸ್. ನೇತೃತ್ವದಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಸಮರ್ಥ ಆರ್. ಗಾಣಿಗೇರ ತಂಡ ಪ್ರಕರಣದಲ್ಲಿ ಭಾಗಿಯಾದ ಬೆಳ್ತಂಗಡಿ ತಾಲೂಕಿನ ಕಡುರುದ್ಯಾವರ ಗ್ರಾಮದ ಸುಮಂತ್ (28) ಮತ್ತು ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ನವನೀತ್ (26)ನನ್ನು ಎಪ್ರಿಲ್ 18 ರಂದು ಸಂಜೆ ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.ಈ ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾದ ಓರ್ವ ಆರೋಪಿ ಕಡುರುದ್ಯಾವರ ಗ್ರಾಮದ ಸುಮಂತ್ಗೆ ಮೇ 10ರಂದು ಮದುವೆ ದಿನಾಂಕ ನಿಶ್ಚಯವಾಗಿತ್ತು.








