ಕನ್ಯಾಡಿ ಸೇವಾಭಾರತಿಯಿಂದ ಸಂಸದರ ಭೇಟಿ

ಕನ್ಯಾಡಿ ಸೇವಾಭಾರತಿಯಿಂದ ಸಂಸದರ ಭೇಟಿ
Facebook
Twitter
LinkedIn
WhatsApp

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಲೋಕಸಭಾ ಸದಸ್ಯರಾಗಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟರವರನ್ನು ಕನ್ಯಾಡಿಯ ಸೇವಾಭಾರತಿ ತಂಡ ಮೇ 12ರಂದು ಭೇಟಿ ನೀಡಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡದ ಕುರಿತು ಪ್ರಸ್ತಾಪಿಸಿ ಸಹಕರಿಸುವಂತೆ ಮನವಿ ಮಾಡಿತು. ಈ ಸಂದರ್ಭದಲ್ಲಿ ಸೇವಾಭಾರತಿ ಅಧ್ಯಕ್ಷ ಹಾಗೂ ಸೇವಾಧಾಮದ ಸಂಸ್ಥಾಪಕರಾದ ಕೆ. ವಿನಾಯಕ ರಾವ್, ಸೇವಾಭಾರತಿಯ ಖಜಾಂಚಿ ಜಯರಾಜ್ ಸಾಲಿಯಾನ್ ಕಾನರ್ಪ, ಟ್ರಸ್ಟಿ ಪೃಥ್ವಿಶ್ ಹಾಗೂ ಕುವೆಟ್ಟು ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಚಂದ್ರಕಾಂತ್ ನಿಡ್ಡಾಜೆ, ಸ್ವಯಂಸೇವಕರಾದ ಜಯರಾಜ್ ರವರು ಉಪಸ್ಥಿತರಿದ್ದರು.

Latest News

Related Posts